ಬೈಕ್, ಲಾರಿ ನಡುವೆ ಅಪಘಾತ: ಇಬ್ಬರು ಯುವಕರ ದುರ್ಮರಣ

ಮಂಡ್ಯ: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.

22 ವರ್ಷದ ಅಜಿತ್ ಮತ್ತು 26 ವರ್ಷದ ಉಮೇಶ್ ಮೃತ ದುರ್ದೈವಿಗಳು. ತಡರಾತ್ರಿ ಕೆಲಸದ ನಿಮಿತ್ತ ಇಬ್ಬರು ಯುವಕರು ಬೈಕ್‍ನಲ್ಲಿ ತೆರಳುತ್ತಿದ್ರು. ಈ ವೇಳೆ ಮದ್ದೂರು ಕೆಎಸ್‍ಆರ್‍ಟಿಸಿ ನಿಲ್ದಾಣದ ಸಮೀಪ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದೀಗ ಮಕ್ಕಳ ಸಾವನ್ನು ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

You might also like More from author

Leave A Reply

Your email address will not be published.

badge