ಬೆಂಗಳೂರು: ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿರುವ ಘಟನೆ ಕೊಡಿಗೆಹಳ್ಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದರು.
ಈ ಪ್ರಕರಣ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.