Monday, 20th November 2017

Recent News

ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ನಟ ಬಾಲಯ್ಯ: ವಿಡಿಯೋ ನೋಡಿ

ಹೈದರಾಬಾದ್: ಟಾಲಿವುಡ್ ಸ್ಟಾರ್ ಕಮ್ ಶಾಸಕ ಬಾಲಕೃಷ್ಣ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಸೆಲ್ಫೀ ತೆಗೆದುಕೊಳ್ಳಲು ಮುಂದಾದ ತಮ್ಮ ಅಭಿಮಾನಿಯೊಬ್ಬರಿಗೆ ಎಲ್ಲರೂ ನೋಡನೋಡ್ತಿದ್ದಂತೆ ಕಪಾಳಕ್ಕೆ ಹೊಡೆದು ಹಿಂದಕ್ಕೆ ತಳ್ಳಿದ್ದಾರೆ.

ಆಂಧ್ರಪ್ರದೇಶದ ನಂದ್ಯಾಳ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ವೇಳೆ ತೆಲಗು ದೇಶಂ ಪಾರ್ಟಿ (ಟಿಡಿಪಿ) ಪಕ್ಷದ ಪರ ಪ್ರಚಾರದಲ್ಲಿ ತೊಡಗಿರುವ ಬಾಲಯ್ಯ ಅಭಿಮಾನಿಯೊಬ್ಬರಿಗೆ ಸಾರ್ವಜನಿಕವಾಗಿ ಕಪಾಳಕ್ಕೆ ಹೊಡೆಯುವ ಮೂಲಕ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

ಟಾಲಿವುಡ್ ಸ್ಟಾರ್ ಆಗಿರುವ ನಂದಮುರಿ ಬಾಲಕೃಷ್ಣಯ್ಯ ಅಭಿಮಾನಿಗಳಿಂದ ಬಾಲಯ್ಯ ಎಂದು ಕರೆಸಿಕೊಳ್ಳುತ್ತಾರೆ. ಸಿನಿಮಾ ಮತ್ತು ರಾಜಕೀಯ ಎರಡೂ ರಂಗದಲ್ಲಿ ಗುರುತಿಸಿಕೊಂಡಿರುವ ಬಾಲಯ್ಯ ತಮ್ಮದೇ ಆದ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಅಳಿಯನಾಗಿರುವ ಬಾಲಯ್ಯ ಉಪಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಈ ಹಿಂದೆಯೂ ಸಿನಿಮಾ ಶೂಟಿಂಗ್ ನಲ್ಲಿ ಬಾಲಯ್ಯ ತಮ್ಮ ಸಹಾಯಕರೊಬ್ಬರಿಗೆ ಕಪಾಳಕ್ಕೆ ಹೊಡೆಯುವ ಮೂಲಕ ಸುದ್ದಿಯಾಗಿದ್ದರು.

 

Leave a Reply

Your email address will not be published. Required fields are marked *