ಎಪಿಎಂಸಿ ಚುನಾವಣೆ: ನೆಲಮಂಗಲದಲ್ಲಿ ಶಾಲಾ ಮಕ್ಕಳಿಗೆ ತಟ್ಟಿತು ಬಿಸಿ

ನೆಲಮಂಗಲ: ತಾಲೂಕಿನ ವಿವಿಧ ಶಾಲೆಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಚುನಾವಣೆ ನಡೆಯುತ್ತಿದೆ. ಮತದಾನದ ವೇಳೆ ಚುನಾವಣಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಎಡವಟ್ಟು ಎದ್ದು ಕಾಣುತ್ತಿದೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ, ಎಪಿಎಂಸಿಯ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ಶಾಲೆಯ ಮಕ್ಕಳು ಮತದಾನದ ಗೊಂದಲದಿಂದ ಪಾಠ ಪ್ರವಚನ ಕೇಳಲಾಗದೇ ಕಿರಿಕಿರಿ ಅನುಭವಿಸಬೇಕಾಯಿತು.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮತದಾನ ನಡೆಯುವ ಶಾಲೆಗಳಿಗೆ ರಜೆಯನ್ನ ಘೋಷಣೆ ಮಾಡಬೇಕಿತ್ತು. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾನುವಾರ ಕೆಲಸ ಮಾಡಬೇಕಾಗುತ್ತದೆ ಎಂದು ಇಂದು ಮಕ್ಕಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಬಗ್ಗೆ ನೆಲಮಂಗಲ ತಹಶೀಲ್ದಾರ ರಮೇಶ್ ಅವರ ಜೊತೆ ಪಬ್ಲಿಕ್ ಟಿವಿ ಮಾತನಾಡಿದಾಗ, ನಾವು ಈಗಾಗಲೇ ರಜೆ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದ್ದೇವೆ. ಎಲ್ಲೂ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ.

LEAVE A REPLY