Tuesday, 24th April 2018

ರೈಲ್ವೇ ನಿಲ್ದಾಣದ ಬಳಿ 21 ವರ್ಷದ ಬ್ಯೂಟಿಷಿಯನ್ ಶವ ಪತ್ತೆ

ಹೈದರಾಬಾದ್: ವಿಕಾರಬಾದ್ ಜಿಲ್ಲೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ 21 ವರ್ಷದ ಬ್ಯೂಟಿಷಿಯನ್ ಮೃತದೇಹ ಪತ್ತೆಯಾಗಿದೆ ಎಂದು ಸರ್ಕಾರಿ ರೈಲ್ವೇ ಪೊಲೀಸರು ತಿಳಿಸಿದ್ದಾರೆ.

ಜ್ಯೋತಿ ಮೃತ ಯುವತಿ. ಸೋಮವಾರ ಪ್ಯಾಸೆಂಜರ್ ರೈಲಿನಲ್ಲಿ ಕೆಲಸಕ್ಕೆಂದು ತೆರಳಿದ್ದರು. ಆದರೆ ಇಂದು ಸುಮಾರು 6 ಗಂಟೆಗೆ ಮೇಲರಾಮ್ ರೈಲ್ವೆ ನಿಲ್ದಾಣದ ಸಮೀಪದ ಟ್ರ್ಯಾಕ್ ಗಳಲ್ಲಿ ಶವವಾಗಿ ಬಿದ್ದಿದ್ದಾರೆ ಎಂದು ಸಂಬಂಧಿಕರು ಹೇಳಿದ್ದಾರೆ.

ಜ್ಯೋತಿ ತನ್ನ ಕೆಲಸದಿಂದ ತುಂಬಾ ಸಮಯವಾದರೂ ಮನೆಗೆ ಹಿಂದಿರುಗಲಿಲ್ಲ ಎಂದು ಸಂಬಂಧಿಕರು ಅವಳನ್ನು ಹುಡುಕಿಕೊಂಡು ಹೋಗಿದ್ದರು. ಆಗ ಆಕೆಯ ಮೃತದೇಹ ಪತ್ತೆಯಾಗಿದೆ. ತಕ್ಷಣ ಅವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಹೋಗಿ ಆಕೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

ಜ್ಯೋತಿ ರೈಲಿನಿಂದ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಆದ್ದರಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಜ್ಯೋತಿಯ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದ್ದರಿಂದ ಈ ಕುರಿತು ಐಪಿಸಿ ಸೆಕ್ಷನ್ 174ರ ಅಡಿಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *