Wednesday, 23rd May 2018

Recent News

ಗೆಲುವಿನ ಸಂಭ್ರಮದಲ್ಲೇ ಬಿಜೆಪಿ ಹೈಕಮಾಂಡ್ ‘ಟಾರ್ಗೆಟ್ ಕರ್ನಾಟಕ’!

ನವದೆಹಲಿ: ಪಂಚ ರಾಜ್ಯ ಚುನಾವಣೆಯ ವಿಜಯೋತ್ಸವ ಸಮಾವೇಶದಲ್ಲಿ ಬಿಜೆಪಿ ಹೈಕಮಾಂಡ್ ತನ್ನ ಮುಂದಿನ ಗುರಿ ಕರ್ನಾಟಕ ಎಂದು ಘೋಷಿಸಿದೆ. ಈ ಮೂಲಕ ಮುಂದಿನ 2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿನ ಗುರಿ ಎಂದು ಹೇಳಿದೆ.

ಉತ್ತರಪ್ರದೇಶದ ಅಭೂತಪೂರ್ವ ಗೆಲುವಿನ ಬಳಿಕ ಇಂದು ದೆಹಲಿಯ ಅಶೋಕ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ ಹಮ್ಮಿಕೊಳ್ಳಲಾಗಿತ್ತು. ಪ್ರಧಾನಿ ಮೋದಿ ಭಾಷಣಕ್ಕೂ ಮುನ್ನ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮುಂದಿನ ದಿನಗಳಲ್ಲಿ ಬಿಜೆಪಿಯ ವಿಜಯಯಾತ್ರೆ ಹಿಮಾಚಲ ಪ್ರದೇಶ, ಗುಜರಾತ್, ಕರ್ನಾಟಕದಲ್ಲೂ ಮುಂದುವರಿಯಲಿದೆ. ಪೂರ್ವ ಹಾಗೂ ದಕ್ಷಿಣ ರಾಜ್ಯಗಳಲ್ಲಿ ಭಾಜಪ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯ ಬಹುಮತಕ್ಕಿಂತ ಹೆಚ್ಚಿನ ಬಹುಮತದೊಂದಿಗೆ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇನ್ನುಳಿದ 2 ವರ್ಷದಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ ಬಾಕಿ ಇರುವ ಕೆಲಸ ಮುಗಿಸಿದ ಮತ್ತೆ ಚುನಾವಣೆಯಲ್ಲಿ ಬಹುಮತ ಪಡೆದು ವಾಪಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು. ಪಂಚರಾಜ್ಯಗಳ ಚುನಾವಣೆ ಫಲಿತಾಂಶ 2014ರ ಚುನಾವಣೆಗಿಂತ ಬಿಜೆಪಿಯನ್ನು 2 ಹೆಜ್ಜೆ ಮುಂದಕ್ಕೆ ಕರೆದೊಯ್ದಿದೆ ಎಂದೂ ಅಮಿತ್ ಶಾ ಹೇಳಿದರು.

Leave a Reply

Your email address will not be published. Required fields are marked *