Wednesday, 19th July 2017

ಬೈಕ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ಕಲಬುರಗಿ: ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ಮೇ 15ರಂದು ಭೀಕರ ಸರಣಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೈಕ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಹೊಡೆತಕ್ಕೆ ಬೈಕ್ ಸವಾರಿಬ್ಬರು ಸುಮಾರು 15 ಅಡಿಯಷ್ಟು ಎತ್ತರಕ್ಕೆ ಹಾರಿದ್ದಾರೆ. ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸಹ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಮೂರು ವರ್ಷದ ಮಗು ಸೇರಿ ಒಟ್ಟು ಮೂರು ಜನ ಸಾವನಪ್ಪಿದ್ದರು.

ಅಪಘಾತದಲ್ಲಿ ಗಾಯಗೊಂಡ ಮೂರು ಜನರನ್ನು ಕಲಬುರಗಿಯ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *