Saturday, 18th November 2017

Recent News

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು- ನಾಲ್ವರು ಪ್ರಯಾಣಿಕರು ಪಾರು

ಬೆಂಗಳೂರು: ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಹಳ್ಳಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *