Friday, 25th May 2018

Recent News

2 weeks ago

ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ!

ಚಿಕ್ಕಬಳ್ಳಾಪುರ: ಮಲಗಿದ್ದ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಣಿವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್(45) ಕೊಲೆಯಾದ ವ್ಯಕ್ತಿ. ಗ್ರಾಮದ ಅರಳಿಕಟ್ಟೆ ಮೇಲೆ ಮಲಗಿದ್ದ ವೆಂಕಟೇಶ್ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಆದರೆ ಕೊಲೆಗೆ […]

2 weeks ago

ಚರ್ಚ್ ಮೇಲೆ ಆತ್ಮಹತ್ಯಾ ಬಾಂಬ್ ದಾಳಿ – 13 ಸಾವು, 41ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತ: ಇಂಡೊನೇಷ್ಯಾದ ಮೂರು ಚರ್ಚ್‍ಗಳ ಮೇಲೆ ಆತ್ಮಹತ್ಯಾ ಬಾಂಬರ್ ಗಳು ನಡೆಸಿದ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದು, 41ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಎರಡನೇ ದೊಡ್ಡ ನಗರವಾದ ಸುರಭಯದಲ್ಲಿರುವ ಸಂತ ಮೇರಿಯಾ ರೋಮ್ ಕ್ಯಾಥೋಲಿಕ್ ಚರ್ಚ್, ಡಿಪೊನಿಗೊರೊದ ಚರ್ಚ್ ಹಾಗೂ ಪಂಟಕೊಸ್ತಾ ಚರ್ಚ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ...

ಮದುವೆಯಾಗುವಂತೆ ಯುವಕನಿಂದ ಕಾಟ- ಮನನೊಂದು ಸೀಮೆ ಎಣ್ಣೆ ಸುರಿದುಕೊಂಡು ಪ್ರತಿಭಾವಂತ ವಿದ್ಯಾರ್ಥಿನಿ ಆತ್ಮಹತ್ಯೆ!

2 weeks ago

ಮೈಸೂರು: ಮದುವೆಯಾಗು ಎಂದು ಯುವಕನೊಬ್ಬ ಕಾಟ ಕೊಡುತ್ತಿದ್ದನೆಂದು ಪ್ರತಿಭಾವಂತ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಪವಿತ್ರಾ(18) ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪವಿತ್ರಾ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಪಿಯುಸಿ...

ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಸಂಬಂಧಿಕರಿಂದ ಹಲ್ಲೆ!

2 weeks ago

ಮಂಡ್ಯ: ಬಾಲ್ಯ ವಿವಾಹ ತಡೆಯಲು ಮುಂದಾದ ಅಧಿಕಾರಿಗಳಿಗೆ ಘೆರಾವ್ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ. ಬಾಲ್ಯ ವಿವಾಹದ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಅಧಿಕಾರಿಗಳು ಬಂದಿದ್ದಾರೆ. ಪರಿಶೀಲನೆ ನಡೆಸುತ್ತಿದ್ದ...

ವಾಕಿಂಗ್ ಮಾಡುವ ವೇಳೆ ಶರ್ಟ್ ಎಳೆದು ಉದ್ಯಮಿ ಮಗಳಿಗೆ ಲೈಂಗಿಕ ಕಿರುಕುಳ!

2 weeks ago

ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಉದ್ಯಮಿ ಮಗಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಎಸ್‍ಎಫ್‍ಎಸ್ ಯಲಹಂಕ ನ್ಯೂಟೌನ್ ಬಳಿ ಶನಿವಾರ ಈ ಘಟನೆ ನಡೆದಿದ್ದು, ಮನೆ ಬಳಿ ವಾಕಿಂಗ್ ಮಾಡುವ ವೇಳೆ ವ್ಯಕ್ತಿಯೊಬ್ಬ ಶರ್ಟ್ ಎಳೆದು ಅಸಭ್ಯವಾಗಿ...

ಬೈಕ್ ತಡೆದು 10 ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿಯ ಬರ್ಬರ ಕೊಲೆ!

2 weeks ago

ಯಾದಗಿರಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯ ಜಿಲ್ಲೆಯ ಸುರಪುರ ತಾಲೂಕಿನ ಅಗತಿರ್ಥಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ನಂದಪ್ಪ ದೊಡ್ಡಮನಿ ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿಯ ವೇಳೆ ನಂದಪ್ಪ ಬೈಕ್ ನಲ್ಲಿ ಹೋಗುತ್ತಿರುವಾಗ 10...

ಮುಂಬೈ ದಾಳಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳೆ ಕಾರಣ: ನವಾಜ್ ಷರೀಫ್

2 weeks ago

ಲಾಹೋರ್: ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು 2008ರ ಮುಂಬೈ ಉಗ್ರ ದಾಳಿಯಲ್ಲಿ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳ ಪಾತ್ರ ಇದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಜತೆ ಮಾತನಾಡಿರುವ ಅವರು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ. ಅವುಗಳು...

ಅಮ್ಮನಿಗಾಗಿ 23ರ ಕರ್ನಾಟಕದ ಯುವತಿಯನ್ನು ಮದ್ವೆಯಾದ 13ರ ಬಾಲಕ

2 weeks ago

ಹೈದರಾಬಾದ್: ಅಮ್ಮನ ಆಸೆಗಾಗಿ 13 ವರ್ಷದ ಬಾಲಕನೊಬ್ಬ 23 ವಯಸ್ಸಿನ ಯುವತಿಯನ್ನು ಮದುವೆಯಾದ ವಿಚಿತ್ರ ಘಟನೆಯೊಂದು ಆಂಧ್ರ ಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯ ಉಪ್ಪರಹಾಳ ಗ್ರಾಮದಲ್ಲಿ ನಡೆದಿದೆ. ಮದುವೆ ಒಂದು ತಿಂಗಳ ಹಿಂದೆ ನಡೆದಿದ್ದು, ಶನಿವಾರ ಪ್ರಕರಣ ಬೆಳಕಿಗೆ ಬಂದಿದೆ. ಒಂದು...