Monday, 25th September 2017

Recent News

22 mins ago

ನಾಡದೇವತೆ ಚಾಮುಂಡಿಗೆ 31 ಕೆ.ಜಿ ತೂಕದ 2 ಬೆಳ್ಳಿ ಆನೆ ಅರ್ಪಿಸಿದ ಡಿಕೆಶಿ

ಮೈಸೂರು: ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ 31 ಕೆಜಿ ತೂಕದ ಎರಡು ಬೆಳ್ಳಿ ಆನೆಗಳನ್ನ ಅರ್ಪಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್, ಎರಡು ದೊಡ್ಡ ಬೆಳ್ಳಿ ಆನೆಗಳನ್ನ ದೇವಿಗೆ ಸಲ್ಲಿಸಿದ್ರು. ಆದಾಯ ತೆರಿಗೆ ಇಲಾಖೆ ದಾಳಿ ನಂತರ ದೇವಸ್ಥಾನಕ್ಕೆ ಆಗಮಿಸಿ ಡಿಕೆಶಿ ಹರಕೆ ಕಟ್ಟಿಕೊಂಡಿದ್ದರು. ಹೀಗಾಗಿ ಇವತ್ತು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿ ಆನೆ ಸಮರ್ಪಣೆ ಮಾಡಿದ್ದಾರೆ. ಭಾನುವಾರದಂದು ಡಿಕೆಶಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ನೆರವೇರಿಸಿ […]

38 mins ago

ಕಣ್ಣಿಗೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀರಾಮಸೇನೆ ಕಾರ್ಯಕರ್ತನ ಬರ್ಬರ ಹತ್ಯೆ

ಬೆಳಗಾವಿ: ಕಣ್ಣಿಗೆ ಖಾರದ ಪುಡಿ ಎರಚಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಶ್ರೀ ರಾಮಸೇನೆ ಕಾರ್ಯಕರ್ತರೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಅಪ್ಸರಾ ಕೂಟದಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತ ಶ್ರೀರಾಮ ಸೇನೆ ಕಾರ್ಯಕರ್ತನನ್ನು ರೋಹಿತ್ ಪಾಟೀಲ್ (23) ಎಂದು ಗುರುತಿಸಲಾಗಿದೆ....

ತಡರಾತ್ರಿಯಿಂದ ಬೆಂಗ್ಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ- ಮನೆಗಳಿಗೆ ನುಗ್ಗಿದ ನೀರು, ಮುಳುಗಿದ ವಾಹನಗಳು

2 hours ago

ಕರ್ನಾಟಕ: ರಾಜ್ಯದ ಹಲವೆಡೆ ತಡರಾತ್ರಿ ವರುಣನ ಆರ್ಭಟಕ್ಕೆ ಮತ್ತೆ ಅವಾಂತರಗಳು ಮುಂದುವರಿದಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ರಸ್ತೆಯಲ್ಲಿಯೇ ವಾಹನಗಳು ಮುಳುಗಿ ಹೋಗಿವೆ. ಇಂದು ಬೆಳ್ಳಂಬೆಳಗ್ಗೆಯೇ ಮಳೆ ಶುರುವಾಗಿದ್ದು, ಶಾಲಾ-ಕಾಲೇಜು ಮತ್ತು ಕಚೇರಿಗೆ ತೆರಳಲು ಜನ ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ತಡರಾತ್ರಿ ಮತ್ತೆ...

ಮುಂಬರೋ ಚುನಾವಣೆಗೆ ಬಿಜೆಪಿ ರಣಕಹಳೆ – ಬೆಂಗ್ಳೂರಲ್ಲಿ ಬೈಕ್ ರ‍್ಯಾಲಿಗೆ ಪ್ಲಾನ್

2 hours ago

ಬೆಂಗಳೂರು: ಮಂಗಳೂರು ಚಲೋ ಬೈಕ್ ಜಾಥಾ ವಿಫಲವಾದ ಬೆನ್ನಲ್ಲೇ ಮತ್ತೊಂದು ಬೈಕ್ ಜಾಥಾ ನಡೆಸಲು ರಾಜ್ಯ ಬಿಜೆಪಿ ನಾಯಕರು ಚಿಂತಿಸಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಜಾಥಾ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಭಾನುವಾರ ರಾತ್ರಿ ನವದೆಹಲಿಯಲ್ಲಿ ರಾಜ್ಯ...

ಮೈಸೂರಿನಲ್ಲಿ ಜಿಟಿಜಿಟಿ ಮಳೆ ನಡುವೆ ಯುವಕರ ಟ್ರೀಣ್ ಟ್ರೀಣ್ ಸೈಕಲ್ ಸಾವರಿ

2 hours ago

ಮೈಸೂರು: ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಇಂದು ಯುವಕರು ಟ್ರೀಣ್ ಟ್ರೀಣ್ ಸೈಕಲ್ ಏರಿ ಮೈಸೂರಿನ ಇತಿಹಾಸದ ಬಗ್ಗೆ ಹಾಗೂ ಮಹತ್ವದ ಬಗ್ಗೆ ಪರಿಚಯ ಮಾಡಿಕೊಂಡರು. ಮೈಸೂರಿನ ದಿವಾನ್ ರಂಗರ್ಚಾಲು ಪುರಭವನದ ಮುಂದೆ ಜಿಲ್ಲಾಧಿಕಾರಿ ರಂದೀಪ್ ಈ ಟ್ರೀಣ್ ಟ್ರೀಣ್ ಸೈಕಲ್...

ಗುಜರಾತ್‍ನ ಡಾಟಾ ಆಪರೇಟರ್ ರಾಜ್ಯಪಾಲರ ಪಿಎ- 2 ವರ್ಷ ಕೆಲಸ ಮಾಡ್ದಿದ್ರೂ ಬಿಟ್ಟಿ ಸಂಬಳ

3 hours ago

ಬೆಂಗಳೂರು: ರಾಜ್ಯಪಾಲ ವಿ.ಆರ್. ವಾಲಾ ಸಾಹೇಬ್ರು ತಮ್ಮ ಪ್ರೈವೇಟ್ ಸೆಕ್ರೆಟರಿಯನ್ನಾಗಿ ನೇಮಕ ಮಾಡಿಕೊಡಿರೋದು ಯಾರನ್ನು ಗೊತ್ತೆ? ಕೇಳಿದ್ರೆ ನಿಮಗೆ ಆಶ್ಚರ್ಯ ಆಗುತ್ತೆ. ರಾಜ್ಯಪಾಲರ ಪಿಎ ಆಗಿರೋದು ಗುಜರಾತ್‍ನ ಮಾರಿಟೈಮ್ ಬೋರ್ಡ್‍ನಲ್ಲಿ ಡಾಟಾ ಎಂಟ್ರಿ ಅಪರೇಟರ್ ಆಗಿದ್ದ ತೇಜಸ್ ಭಟ್ಟಿ. ರಾಜ್ಯಪಾಲರ ಪ್ರಪೋಸಲ್...

ಆಂಧ್ರ ಬಸ್ ಡಿಕ್ಕಿಯಾಗಿ ಮಗುಚಿ ಬಿದ್ದ ಓಮ್ನಿ: ಓರ್ವನ ಕಾಲು ಮುರಿತ

3 hours ago

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬಸ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿದೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮಾರ್ಕೆಟ್ ಕಡೆಯಿಂದ ರಾಮಮೂರ್ತಿನಗರಕ್ಕೆ ಹೊಗುತ್ತಿದ್ದ ಓಮ್ನಿ ಕಾರಿಗೆ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ....

ಮಡಿಕೇರಿಯಲ್ಲಿ ಸೂಚನೆ ಧಿಕ್ಕರಿಸಿ ಟ್ರಾಫಿಕ್ ಪೇದೆಗೆ ಗುದ್ದಿತು ಓಮ್ನಿ ಕಾರು

15 hours ago

ಮಡಿಕೇರಿ: ಟ್ರಾಫಿಕ್ ನಿಯಂತ್ರಿಸುತ್ತಿದ್ದ ಎಎಸ್‍ಐ ಒಬ್ಬರಿಗೆ ಓಮ್ನಿ ಕಾರು ಡಿಕ್ಕಿ ಹೊಡೆ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದಿದೆ. ಟ್ರಾಫಿಕ್ ಪೊಲೀಸ್ ಸೂಚನೆಯನ್ನು ಮೀರಿ ಚಾಲಕ ವಾಹನ ಚಾಲನೆ ಮಾಡಿದ್ದರಿಂದ ಘಟನೆ ನಡೆದಿದ್ದು, ವೃತ್ತದಲ್ಲಿ ಅಳವಡಿಸಿದ್ದ...