Saturday, 24th February 2018

Recent News

8 months ago

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ- 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಕಾಲು ಕಟ್

ಬೆಂಗಳೂರು: ಮಹಾನಗರಿ ಬೆಂಗಳೂರಲ್ಲಿ ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಸಂಭವಿಸಿದೆ. ಚಂದ್ರಲೇಔಟ್ ಮುಖ್ಯ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಇನೋವಾ ಕಾರು ರಸ್ತೆ ಬದಿಯಲಿದ್ದ ಒಂದು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಅಂಗಡಿಗೂ ಗುದ್ದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಾಲುಗಳು ತುಂಡಾಗಿವೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಇನೋವಾ ಕಾರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸಿದ್ದಾರೆ.

8 months ago

ಹ್ಯಾಟ್ರಿಕ್ ಹೀರೋಗೆ ಇಂದು 55ರ ಸಂಭ್ರಮ: ಶಿವಣ್ಣನ ಬರ್ತ್ ಡೇಗೆ ಅಪ್ಪು ಕೊಟ್ಟ ಗಿಫ್ಟ್ ಏನು ಗೊತ್ತೆ?

ಬೆಂಗಳೂರು: ಸ್ಯಾಂಡಲ್ ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಿಂದು 55 ನೇ ಹುಟ್ಟು ಹಬ್ಬದ ಸಂಭ್ರಮ. ಶಿವರಾಜ್ ಕುಮಾರ್, ತಮ್ಮ ನಿವಾಸದಲ್ಲಿ ತಡರಾತ್ರಿ ಕುಟುಂಬಸ್ಥರು, ಸ್ನೇಹಿತರ ಹಾಗೂ ನೂರಾರು ಜನ ಅಭಿಮಾನಿಗಳ ಸಮ್ಮುಖದಲ್ಲಿ ಸರಳವಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಮೊದಲಿಗೆ ಕೇಕ್ ಕತ್ತರಿಸಿ, ಬಳಿಕ ಸ್ನೇಹಿತರು ಮತ್ತು...

ಸರ್ಕಾರ ಒಂದು ಬಾರಿ ಏಳುತ್ತೆ, ಮತ್ತೊಮ್ಮೆ ಮಲಗುತ್ತೆ: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

8 months ago

ಬೆಂಗಳೂರು: ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೌಹಾರ್ಧತೆಗೆ ಧಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಸರ್ಕಾರ ಇದ್ಯಾ ಎಂದು ಪ್ರಶ್ನೆ ಮಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಒಂದು ಬಾರಿ ಏಳುತ್ತದೆ, ಮತ್ತೊಂದು...

ಬಿಜೆಪಿ ಯುವ ಮೋರ್ಚಾ ಲೀಡರ್ ಆದೇಶದ ಮೇರೆಗೆ ಈಶ್ವರಪ್ಪ ಪಿಎ ಕಿಡ್ನಾಪ್?

8 months ago

ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಪಿಎ ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಅಪಹರಣದ ಹಿಂದೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಅರಸ್ ಕೈವಾಡ ಇದೆ ಎನ್ನುವ ಆರೋಪ ಕೇಳಿ ಬಂದಿದೆ. ಪ್ರಕರಣದಲ್ಲಿ...

ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

8 months ago

ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‍ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ. ನೈಸ್ ಕಂಪೆನಿ ಜುಲೈ 1 ರಿಂದ ಶೇ 33 ರಷ್ಟು ಟೋಲ್ ದರ...

ಇತ್ತೀಚೆಗೆ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದೀರಿ- ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ

8 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾವೂದ್ ಇಬ್ರಾಹಿಂ ಚಿಕ್ಕಪ್ಪನಂತೆ ವರ್ತಿಸುತ್ತಿದ್ದಾರೆಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಹಿರಿಯ ಸಂಸದ ಪ್ರಹ್ಲಾದ್ ಜೋಶಿ ಸಿಎಂಗೆ ಪತ್ರ ಬರೆದಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದ ಕೋಮು ಗಲಭೆ ಸಂಬಂಧ ಸಿಎಂಗೆ ಬರೆದಿರುವ ಪತ್ರದಲ್ಲಿ ಪ್ರಹ್ಲಾದ್ ಜೋಶಿ ಈ ಆರೋಪ...

ಮಾಲ್‍ಗಳ ಬಿಲ್ ಮೇಲೆ ಜಿಎಸ್‍ಟಿ ಟ್ಯಾಕ್ಸ್: ಈ ಸಂದೇಶವನ್ನು ಕಳಿಸೋ ಮುನ್ನ ಈ ಸುದ್ದಿ ಓದಿ

8 months ago

ಬೆಂಗಳೂರು: “ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಗೆ ಬಂದ ಬಳಿಕ ದೊಡ್ಡ ದೊಡ್ಡ ಮಾಲ್ ಗಳಲ್ಲಿ ಬಿಲ್‍ಗಳ ಮೇಲೆ ಹೆಚ್ಚುವರಿ ತೆರಿಗೆ ಹಾಕಲಾಗುತ್ತಿದೆ” ಹೀಗೊಂದು ಸಂದೇಶ ವಾಟ್ಸಪ್ ನಲ್ಲಿ ಹರಿದಾಡುತ್ತಿದೆ. ಆದರೆ ದಯವಿಟ್ಟು ಈ ರೀತಿಯ ಸಂದೇಶವನ್ನು ಯಾರು ಕಳುಹಿಸಬೇಡಿ. ಇದು...

#BurningKarnataka ಟ್ವಿಟ್ಟರ್‍ನಲ್ಲಿ ಟ್ರೆಂಡಿಗ್ ಆಗುತ್ತಿದೆ ಕರಾವಳಿಯ ಕೋಮುಗಲಾಟೆ

8 months ago

ಬೆಂಗಳೂರು: ಕರ್ನಾಟಕದ ಕರಾವಳಿಯ ಕೋಮುಗಲಾಟೆ ಈಗ ಟ್ವಿಟರ್‍ನಲ್ಲಿ ಟ್ರೆಂಡಿಂಗ್ ಆಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆ ಹಾಗೂ ಅನ್ಯಾಯಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‍ಗೆ ಹಾಗೂ ರಾಷ್ಟ್ರಪತಿಗಳ ಗಮನಕ್ಕೆ ತರಲು ಟ್ವಿಟ್ಟರ್ ನಲ್ಲಿ ಈ...