Saturday, 24th February 2018

Recent News

1 year ago

ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿಯಿಟ್ಟ ವ್ಯಕ್ತಿಯ ಬಂಧನ

ಚಾಮರಾಜನಗರ: ಜಿಲ್ಲೆಯ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಚಾಮರಾಜನಗರ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಮೋಹನ್ ಕುಮಾರ್ ರಥಕ್ಕೆ ಬೆಂಕಿ ಹಚ್ಚಿದವನು. ಮೋಹನ್ ಕುಮಾರ್ ನಗರ ಸಭೆ ಮಾಜಿ ಅಧ್ಯಕ್ಷೆಯೊಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ಕಳೆದ ಭಾನುವಾರ ತಡರಾತ್ರಿ ರಥಕ್ಕೆ ಬೆಂಕಿ ಹಚ್ಚಿ ಅಲ್ಲಿಂದ ಕಾಲ್ಕಿತ್ತಿದ್ದನು. ಪೊಲೀಸರು ಮೋಹನ್ ಕುಮಾರ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇಂದು ಮೋಹನ್ ಕುಮಾರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.    

1 year ago

ನಾಗರಹೊಳೆ ಅರಣ್ಯದಲ್ಲಿ ಕರಡಿಗೆ ಹೆದರಿ ಓಟ ಕಿತ್ತ ಹುಲಿರಾಯ- ವೀಡಿಯೋ ನೋಡಿ

ಚಾಮರಾಜನಗರ: ಹುಲಿಯಂತಹ ಬಲಿಷ್ಠ ಪ್ರಾಣಿಯನ್ನೇ ಕರಡಿಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ ಪ್ರವಾಸಿಗರೊಬ್ಬರಿಗೆ ಸೆರೆಸಿಕ್ಕಿದೆ. ಬೆಂಗಳೂರಿನ ಅಭಿಷೇಕ್ ಎಂಬುವವರು ನಾಗರಹೊಳೆಯಲ್ಲಿ ಸಫಾರಿಗೆ ಹೋಗಿದ್ದ ಸಂದರ್ಭದಲ್ಲಿ ಈ ದೃಶ್ಯ ಸೆರೆಹಿಡಿದಿದ್ದಾರೆ. ವನ್ಯಜೀವಿ ತಜ್ಞರು ಹೇಳುವ ಪ್ರಕಾರ ನೀರಿಗಾಗಿ ಇಂತಹ ಕಾದಟಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ. ನೀರಿಗೋಸ್ಕರ ಎದುರಾಳಿ ಪ್ರಾಣಿ ಎಷ್ಟೇ ಬಲಿಷ್ಠವಾಗಿದ್ದರು ಬದುಕುವ...