2 days ago
ರಾಮನಗರ: ರಾಮನಗರ ಮತ್ತು ಚನ್ನಪಟ್ಟಣದಿಂದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿಯವರು ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ಈ ಬಾರಿ ರಾಜ್ಯದ ಜನ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು. ಎಚ್ಡಿ ಕುಮಾರಸ್ವಾಮಿಯವರು ಒಟ್ಟು 42,91,16,270 ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅನಿತಾ ಕುಮಾರಸ್ವಾಮಿಯವರು ಒಟ್ಟು 87,22,90,000 ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ. 12.14 ಲಕ್ಷ ರೂಪಾಯಿ ನಗದನ್ನು ಎಚ್ಡಿಕೆ ಹೊಂದಿದ್ದಾರೆ. ಇದನ್ನೂ ಓದಿ: ಬಿಎಸ್ವೈ ಬಳಿಯಿದೆ 7.23 ಕೋಟಿ ರೂ. ಮೌಲ್ಯದ ಆಸ್ತಿ! ಎಚ್ಡಿ ಕುಮಾರಸ್ವಾಮಿ ಆಸ್ತಿ […]
3 days ago
ರಾಮನಗರ: ಇಂಧನ ಸಚಿವ ಡಿಕೆ ಶಿವಕುಮಾರ್ ತಮ್ಮ ಬಳಿ 548,85,20,592 ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಕನಕಪುರ ತಾಲೂಕಿನ ಕಬ್ಬಾಳುವಿನಲ್ಲಿರುವ ಕಬ್ಬಾಳಮ್ಮ ದೇವಿಗೆ, ಕನಕಪುರದ ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸಿದರು. ದೇವಾಲಯದಿಂದ ಬೃಹತ್ ರ್ಯಾಲಿ ಮೂಲಕ ಸಾವಿರಾರು ಬೆಂಬಲಿಗರೊಡನೆ ತಾಲೂಕು ಕಚೇರಿಗೆ ಆಗಮಿಸಿದ...
1 week ago
ರಾಮನಗರ: ಮರಳು ತುಂಬಿದ್ದ ಟ್ರ್ಯಾಕ್ಟರ್- ಬೈಕ್ ಗೆ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(40) ಮೃತ ಪೇದೆ. ನಾಗರಾಜ್ ಹಾಗೂ ಪುತ್ರಿ ತಮ್ಮ ಮನೆಯ ಗೃಹ ಪ್ರವೇಶದ ಆಮಂತ್ರಣ ಪತ್ರಿಕೆ ಕೊಡಲು...
1 week ago
ರಾಮನಗರ: ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಿಟಾಚಿಯ ಮೇಲೆ ಕಲ್ಲು ಬಂಡೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ವೆಂಗಳಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿಜಾಪುರ ಮೂಲದ ಮೊಹಮ್ಮದ್(23) ಮತ್ತು ಬಿಹಾರ ಮೂಲದ...
2 weeks ago
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ಮಾರಮ್ಮ ದೇವಿ ಜಾತ್ರೆಯಲ್ಲಿ ಕೊಂಡ ಹಾಯುವ ವೇಳೆ ಅರ್ಚಕರು ಬಿದ್ದಿದ್ದಾರೆ. ರವಿ ಪೂಜಾರಿ ಕೊಂಡದಲ್ಲಿಯೇ ಬಿದ್ದ ಅರ್ಚಕ. ಒಂದು ಕಡೆಯಿಂದ ಇನ್ನೊಂದು ಕಡೆಗೆ ಕೊಂಡದಲ್ಲಿ ಓಡಿ ಬರುತ್ತಿರುವಾಗ ರವಿ ಅಲ್ಲಿಯೇ ಬಿದ್ದಿದ್ದಾರೆ. ಕೂಡಲೇ...
2 weeks ago
ರಾಮನಗರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಕೆರೆಯಲ್ಲಿ ನಡೆದಿದೆ. ಶೇಖರ್ (39), ಸುಮಾ(28), ಹಂಸಾ (7) ಮತ್ತು ಧನು (8) ಮೃತ ದುರ್ದೈವಿಗಳು. ಮೂಲತಃ ಚನ್ನಪಟ್ಟಣದ ಹನುಮಂತ ನಗರದ ನಿವಾಸಿಗಳಾದ ಶೇಖರ್ ಮತ್ತು...
3 weeks ago
ರಾಮನಗರ: ರಾಜ್ಯ ಚುನಾವಣಾ ದಿನಕಳೆದಂತೆ ರಂಗೇರುತ್ತಿದೆ. ಸಿಎಂ ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರ, ಸಿಎಂ ಪುತ್ರ ಯತೀಂದ್ರ ಸ್ಪರ್ಧಿಸಲಿರುವ ವರುಣಾ ಕ್ಷೇತ್ರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಪಟ್ಟಿಗೆ ಚನ್ನಪಟ್ಟಣ ಕ್ಷೇತ್ರ ಸೇರ್ಪಡೆಯಾಗಿದ್ದು, ಭಾರೀ ಕುತೂಹಲ ಮೂಡಿಸಿದೆ. ರಾಮನಗರದ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದಲ್ಲಿ ರಾಜಕೀಯ...
3 weeks ago
ರಾಮನಗರ: ರಾಮನಗರ, ಚನ್ನಪಟ್ಟಣ ಎರಡೂ ಕಡೆಯಿಂದ ಎಚ್ಡಿ ಕುಮಾರಸ್ವಾಮಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದ್ದಾರೆ. ರಾಮನಗರದಲ್ಲಿ ನಡೆದ ಜೆಡಿಎಸ್ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು ರಾಮನಗರ, ಚನ್ನಪಟ್ಟಣ ಎರಡು ಕಣ್ಣಿದ್ದಂತೆ. ನಿಮ್ಮೆಲ್ಲರ ಒತ್ತಡಕ್ಕೆ...