Wednesday, 23rd May 2018

Recent News

18 mins ago

ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ- ಎಚ್‍ಡಿ ಕುಮಾರಸ್ವಾಮಿ

ಮೈಸೂರು: ಈವತ್ತಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ ಅಂತ ಭಾವಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸೆಯಾಗಿತ್ತು. ಹೀಗಾಗಿ ಇವತ್ತಿನ ಪರಿಸ್ಥಿತಿಯಲ್ಲಿ ಸಿಎಂ ಆಗುತ್ತಿರುವುದು ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಇಂದು ಪರಮೇಶ್ವರ್ ಅವರು ನನ್ನೊಂದಿಗೆ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಸಚಿವ ಸಂಪುಟದ ಸದಸ್ಯರ ಪ್ರಮಾಣವಚನ ನಂತರ ಗೊತ್ತಾಗಲಿದೆ […]

2 hours ago

ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿಗಳು ಒಟ್ಟು ಸೇರಿವೆ- ಜಗ್ಗೇಶ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮೋದಿಯೆಂಬ ಸಿಂಹವನ್ನು ಅಡ್ಡಗಟ್ಟಲು ನಾಯಿ, ನರಿ ಹಾಗೂ ಜಿಗಣೆಗಳೆಲ್ಲವೂ ಒಟ್ಟು ಸೇರಿವೆ ಅಂತ ನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಪಮಿತ್ರ ಮೈತ್ರಿಯನ್ನು ವಿರೋಧಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಮಾತನಾಡಿದ ಜಗ್ಗೇಶ್, ಭಾರತೀಯ ಜನತಾ ಪಾರ್ಟಿ ಕಪ್ಪು ಪಟ್ಟಿ ಧರಿಸಿ ಕರಾಳ ದಿನವನ್ನು ಆಚರಿಸುತ್ತಿದೆ....

ಜೆಡಿಎಸ್, ಕಾಂಗ್ರೆಸ್ ಮೈತ್ರಿ: 2019ರಲ್ಲಿ ಮೋದಿಗೆ ಹಿನ್ನಡೆ ಆಗುತ್ತಾ? ರಾಜಕೀಯ ಲೆಕ್ಕಾಚಾರ ಹೇಗೆ?

5 hours ago

ಬೆಂಗಳೂರು: 2019ರ ಲೋಕಸಭಾ ಚುನಾವಣೆ ಮೋದಿಯನ್ನು ಮಣಿಸಲು ವಿರೋಧ ಪಕ್ಷಗಳು ಮಹಾಮೈತ್ರಿಗೆ ಕರೆ ನೀಡಿದ ಪರಿಣಾಮ ದಕ್ಷಿಣ ಭಾರತದಲ್ಲಿ ಕರ್ನಾಟಕದ ಮೂಲಕ ಪ್ರವೇಶಿಸಲು ಮುಂದಾಗಿದ್ದ ಬಿಜೆಪಿಯ ಬಾಗಿಲು ಬಂದ್ ಆಗಿದೆ. ಬಿಜೆಪಿಗೆ ಅಧಿಕಾರ ತಪ್ಪಿಸಲು ಜೆಡಿಎಸ್ ಕಾಂಗ್ರೆಸ್ ತೆಗೆದುಕೊಂಡ ರಾಜಕೀಯ ನಡೆ...

ಸುಗಮ ಆಡಳಿತಕ್ಕೆ ಸಮನ್ವಯ ಸಮಿತಿ ರಚನೆ- ಜಿ. ಪರಮೇಶ್ವರ್

5 hours ago

ಬೆಂಗಳೂರು: ರಾಜ್ಯದ ಜನತೆಯ ಸೇವೆ ಮಾಡಲು ಮತ್ತೊಂದು ಅವಕಾಶ ಸಿಕ್ಕಿದೆ. ಪಕ್ಷದ ಕಾರ್ಯಕರ್ತರಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಲು ಇದೊಂದು ಸ್ಫೂರ್ತಿಯಾಗಲಿ ಅಂತ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತಮ್ಮ ನಿವಾಸ ಸದಾಶಿವನಗರದಲ್ಲಿ...

ರಾತ್ರೋರಾತ್ರಿ ಶಾಸಕರಿದ್ದ ರೆಸಾರ್ಟ್ ಗೆ ಕುಮಾರಸ್ವಾಮಿ ಭೇಟಿ!

6 hours ago

ಚಿಕ್ಕಬಳ್ಳಾಪುರ: ಇಲ್ಲಿನ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‍ಗೆ ರಾತ್ರೋ ರಾತ್ರಿ ಕುಮಾರಸ್ವಾಮಿ ಭೇಟಿ ನೀಡಿ ಜೆಡಿಎಸ್ ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ. ದೇವನಹಳ್ಳಿ ತಾಲೂಕು ಕೋಡಗುರ್ಕಿ ಬಳಿಯ ರೆಸಾರ್ಟ್ ಗೆ ಭಾವಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬಳಿಕ ಜೆಡಿಎಸ್...

ನೂತನ ಡಿಸಿಎಂಗೆ ವಿಶ್ ಮಾಡಿ ಕುತೂಹಲ ಮೂಡಿಸಿದ್ರು ಪ್ರತಾಪ್ ಸಿಂಹ!

7 hours ago

ಮೈಸೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೆಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೂತನ ಡಿಸಿಎಂ ಗೆ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್...

ಸಿಎಂ ಆಗಿ ಎಚ್‍ಡಿಕೆ, ಡಿಸಿಎಂ ಆಗಿ ಪರಂ ಇಂದು ಪ್ರಮಾಣವಚನ- ಟ್ರಾಫಿಕ್ ಜಾಮ್ ತಪ್ಪಿಸಲು ಮಾರ್ಗ ಬದಲಾವಣೆ

7 hours ago

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ, 2ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಜೆ 4.30ಕ್ಕೆ ವಿಧಾನಸೌಧದ ಮುಂದೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಕುಮಾರಸ್ವಾಮಿ ಜೊತೆಗೆ ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್...

ಸಮ್ಮಿಶ್ರ ಸರ್ಕಾರದಿಂದ ರೈತರ ಸಂಪೂರ್ಣ ಸಾಲ ಮನ್ನಾ ಡೌಟ್!

23 hours ago

ಮಂಗಳೂರು: ರೈತರ ಸಾಲಮನ್ನಾ ಕುರಿತು ಭಾವಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಗೊಂದಲದ ಹೇಳಿಕೆಯನ್ನು ಕೊಟ್ಟಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೂರ್ಣ ಬಹುಮತ ಬಂದ್ರೆ ರೈತರ ಸಾಲಮನ್ನಾ ಎಂದಿದ್ದೆ. ಆದರೆ ರಾಜ್ಯದ ಜನತೆ...