Sunday, 24th June 2018

Recent News

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗ- ಕೈ ಅಭ್ಯರ್ಥಿಗೆ ಸಿಕ್ಕಿದ್ದು ಒಂದೇ ಮತ

ಶಿವಮೊಗ್ಗ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.

ಪಕ್ಷದ ಮೇಯರ್ ಅಭ್ಯರ್ಥಿಗೆ ಕಾಂಗ್ರೆಸ್ ಸದಸ್ಯರೇ ಮತ ನೀಡಿಲ್ಲ. ಪಾಲಿಕೆಯಲ್ಲಿ 13 ಕಾಂಗ್ರೆಸ್ ಕಾರ್ಪೊರೇಟರ್ ಗಳು ಇದ್ದರೂ ಕಾಂಗ್ರೆಸ್ ನ ಮೇಯರ್ ಅಭ್ಯರ್ಥಿ ರಾಜಶೇಖರ್ ಗೆ ಸಿಕ್ಕಿದ್ದು ಅವರದ್ದೊಂದೇ ಮತ. ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ಹಾಗೂ ಎಂಎಲ್‍ಸಿ ಪ್ರಸನ್ನ ಕುಮಾರ್ ಕೂಡ ಪಾಲ್ಗೊಂಡಿದ್ದರು.

ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಜೊತೆ ಕಾಂಗ್ರೆಸ್ ಕೈಜೊಡಿಸಿದ್ದು, ಜೆಡಿಎಸ್ ನ ನಾಗರಾಜ್ ಕಂಕಾರಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಕಾಂಗ್ರೆಸ್ ನ ವಿಜಯಲಕ್ಷ್ಮಿ ಪಾಟೀಲ್ ಆಯ್ಕೆಯಾಗಿದ್ದಾರೆ.

ಇದೂವರೆಗೂ ಜೆಡಿಎಸ್ ಗೆ ಮೇಯರ್ ಸ್ಥಾನ, ಬಿಜೆಪಿಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಂಡು ಅಧಿಕಾರ ಚಲಾಯಿಸಿದ್ದರು. ಈ ಬಾರಿ ಜೆಡಿಎಸ್ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ಮೂಲಕ ಮತ್ತೊಮ್ಮೆ ಮೇಯರ್ ಸ್ಥಾನ ಹಿಡಿಯುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *