Thursday, 22nd March 2018

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ.

ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು ಮಾರುತಿ 800 ಕಾರ್ ನಲ್ಲಿ ಬಂದ ದುಷ್ಕರ್ಮಿಗಳು ದನಗಳನ್ನು ಓಡಿಸಿಕೊಂಡು ಹೋಗಿ ಅಪಹರಿಸಿ ಕಾರ್ ನಲ್ಲಿ ತುಂಬಿಕೊಂಡು ಹೋಗಿದ್ದಾರೆ. ಸುಳ್ಯ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿ ಘಟನೆ ನಡೆದಿದ್ದು, ಮಧ್ಯರಾತ್ರಿಯೇ ದುಷ್ಕರ್ಮಿಗಳು ಕೃತ್ಯ ನಡೆಸಿದ್ದಾರೆ.

ಬಿಡಾಡಿ ದನಗಳನ್ನು ಮಾರುತಿ 800 ಕಾರ್ ನಲ್ಲಿ ಅಮಾನುಷವಾಗಿ ತುಂಬಿಕೊಂಡು ಹೋಗಿ ಹತ್ಯೆ ಮಾಡುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ರೂ ಕಳ್ಳತನ ಮಾತ್ರ ನಿಂತಿಲ್ಲ. ರಸ್ತೆ ಬದಿಯ ದನಗಳ ಸ್ಥಿತಿ ಈ ರೀತಿಯಾದ್ರೆ ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಲ್ಲೂ ಕಳ್ಳರು ಅಟ್ಟಹಾಸ ಮೆರೆಯುತ್ತಿದ್ದರು. ಅಲ್ಲದೇ ಕೊಟ್ಟಿಗೆಗೆ ನುಗ್ಗಿ ದನಕಳ್ಳತನ ನಡೆಸುತ್ತಿದ್ದಾರೆ ಅಂತ ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *