Saturday, 23rd June 2018

Recent News

ಡ್ಯುಕ್ ಬೈಕ್ ಕ್ರೇಜ್: ವೈದ್ಯಕೀಯ ವಿದ್ಯಾರ್ಥಿ ಬಲಿ

ಬೀದರ್: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ಸ್ಥಳದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೀದರ್ ಹೊರ ವಲಯದ ಬೆನಕನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಬೀದರ್ ವೈದ್ಯಕೀಯ ಮಹಾವಿದ್ಯಾಲಯದ (ಬ್ರೀಮ್ಸ್) ವಿನೋದ ದೊಡಮನಿ (22) ಮೃತ ವಿದ್ಯಾರ್ಥಿ. ಮೃತ ವಿನೋದ ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಿವಾಸಿಯಾಗಿದ್ದು ಹಾಸ್ಟೆಲ್ ನಲ್ಲಿದ್ದುಕೊಂಡು ಎಂಬಿಬಿಎಸ್ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ.

ಡ್ಯುಕ್ ಬೈಕ್ ಮೇಲೆ ಒಂದು ರೌಂಡ್ ಹೋಗಲು ಕ್ರೇಜ್‍ಗಾಗಿ ಬೆಳಗ್ಗೆ 9 ಗಂಟೆ ಸುಮಾರಿಗೆ ಬೆನಕನಹಳ್ಳಿ ರಸ್ತೆ ಮಾರ್ಗವಾಗಿ ಹೊರಟಿದ್ದ. ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿ ಹೊಡೆದು ರಸ್ತೆಯಿಂದ ಹೊರಗೆ ಬಿದ್ದಿದ್ದಾನೆ. ತಲೆ ಹಾಗೂ ಮುಖಕ್ಕೆ ಬಲಬಾದ ಪೆಟ್ಟು ಬಿದ್ದಿದ್ದರಿಂದ ವಿನೋದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ತಂದೆ ಹಾಗೂ ಕೆಲವು ಸಂಬಂಧಿಕರು ಬಂದಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *