Tuesday, 24th April 2018

ಟಿಕೆಟ್ ತಪ್ಪಿದ್ದಕ್ಕೆ ಗೋಳೊ ಅಂತಾ ಗಳಗಳನೇ ಕಣ್ಣೀರಿಟ್ಟ ಬಿಜೆಪಿ ಮಾಜಿ ಎಂಎಲ್‍ಸಿ

ಕಲಬುರಗಿ: ಇಂದು ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಯಾಗಿದೆ. ಪಟ್ಟಿಯಲ್ಲಿ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿದ್ದಕ್ಕೆ ಮಾಜಿ ಎಂಎಲ್‍ಸಿ ಶಶೀಲ್ ನಮೋಶಿ ಗಳಗಳನೇ ಅತ್ತಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲಬುರಗಿ ಉತ್ತರದ ಕ್ಷೇತ್ರದಿಂದ ನನಗೆ ಟಿಕೆಟ್ ಸಿಗುತ್ತೆ ಎಂಬ ನಂಬಿಕೆ ಇತ್ತು. ಆದ್ರೆ ಇಂದು ಬಿಡುಗಡೆಯಾದ ಪಟ್ಟಿಯಲ್ಲಿ ಚಂದ್ರಕಾಂತ್ ಬಿ. ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಎಲ್ಲ ವಿಭಾಗಗಳಲ್ಲಿಯೂ ನಾನು ಸಮರ್ಥ ಅಭ್ಯರ್ಥಿಯಾಗಿದ್ದು, 1992ರಿಂದಲೂ ಪಕ್ಷದಲ್ಲಿದ್ದೇನೆ ಎಂದು ಹೇಳಿ ಭಾವುಕರಾಗಿ ಕಣ್ಣೀರು ಹಾಕಿದರು.

ಇದಾದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ನಾನು ಯಾರ ವಿರುದ್ಧವೂ ಹೇಳಿಕೆಗಳನ್ನು ನೀಡಲ್ಲ. ಆದ್ರೆ ನನಗೆ ಮೋಸ ಆಗಿದ್ದು ಮಾತ್ರ ಸತ್ಯ. ಬಿಜೆಪಿ ಹೈಕಮಾಂಡ್ ನಡೆಸಿದ ಸರ್ವೆಯಲ್ಲಿ ನನ್ನ ಹೆಸರು ಉಲ್ಲೇಖಿಸಲಾಗಿದೆ ಎಂಬ ಮಾಹಿತಿಗಳು ನನಗೆ ಸಿಕ್ಕಿದ್ದವು. ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯನ್ನು ಕೆರೆದು ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *