Friday, 25th May 2018

Recent News

ಕಿಡಿಗೇಡಿಗಳಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ಕಳ್ಳತನ

ಹಾಸನ: ಗಣಪತಿ ಹಬ್ಬದ ಹಿನ್ನಲೆಯಲ್ಲಿ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ಮೂರ್ತಿಗಳನ್ನೇ ಕಳ್ಳರು ಕದ್ದಿರುವ ಘಟನೆ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದಿದೆ.

ಸಕಲೇಶಪುರ ತಾಲೂಕಿನ ಗ್ರಾಮಗಳಾದ ವಳಲಹಳ್ಳಿ, ಹೊಸಹಳ್ಳಿ, ಚಿನ್ನಳ್ಳಿಯ ಸಾರ್ವಜನಿಕರು ವಳಲಹಳ್ಳಿ ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ಮಣ್ಣಿನ ಗಣಪತಿಯನ್ನು ಕೂರಿಸಿದ್ದರು. ಆದರೆ ಕಳೆದ ರಾತ್ರಿ ಕಿಡಿಗೇಡಿಗಳು ಗಣಪತಿ ಮೂರ್ತಿಯನ್ನು ಕದ್ದು ಪರಾರಿಯಾಗಿದ್ದಾರೆ.

ಈ ವಿಚಿತ್ರ ಘಟನೆ ಬಗ್ಗೆ ಭಕ್ತರಲ್ಲಿ ಮತ್ತು ಸ್ಥಳೀಯರಲ್ಲಿ ಆಶ್ಚರ್ಯಕ್ಕೆ ಕಾರಣವಾಗಿದೆ. ಗಣಪತಿ ಮೂರ್ತಿ ಕಳ್ಳತನ ಕುರಿತು ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *