ಮೈಸೂರು: ಮಾನಸಿಕ ಖಿನ್ನತೆಗೊಳಗಾಗಿ ಕಾಲೇಜು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿದ್ದಾರ್ಥ ನಗರದಲ್ಲಿ ನಡೆದಿದೆ.
19 ವರ್ಷದ ಮೋನಿಕಾ ಆತ್ಮಹತ್ಯೆಗೆ ಶರಣಾದ ಯುವತಿ. ಸಿದ್ದಾರ್ಥನಗರದಲ್ಲಿ ವಾಸಿಸುತ್ತಿದ್ದು, ಮೈಸೂರಿನ ಖಾಸಗಿ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಕೆಲ ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರಿಂದ ಭಾನುವಾರ ರಾತ್ರಿ ತನ್ನ ಕೋಣೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.