Thursday, 23rd January 2020

ವಿವಾಹಿತ ವ್ಯಕ್ತಿಯ ಕಿರುಕುಳ- 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ನವದೆಹಲಿ: ಶಾಲೆಗೆ ಹೋಗುವಾಗ ವಿವಾಹಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದರಿಂದ ಮನನೊಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸುಲ್ತಾನ್‍ಪುರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಸೆಪ್ಟೆಂಬರ್ 19ರಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಬಾಲಕಿಯ ಪೋಷಕರು ಶನಿವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಡೆದದ್ದು ಏನು?
ಬಾಲಕಿ ಶಾಲೆ ಹಾಗೂ ಟ್ಯೂಷನ್‍ಗೆ ಹೋಗುವಾಗ ಸ್ಥಳೀಯ ವಿವಾಹಿತ ವ್ಯಕ್ತಿಯೊಬ್ಬ ಆಕೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಜೊತೆಗೆ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದ ಆಕೆಯ ಸಹೋದರರನ್ನು ಥಳಿಸಿದ್ದ. ಮದುವೆ ಆಗುತ್ತೇನೆ ಅಂತ ಪ್ರಸ್ತಾಪ ಮಾಡಿದ್ದನು. ಈ ಎಲ್ಲಾ ಘಟನೆಗಳಿಂದ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು ಎಂಬುದಾಗಿ ವರದಿಯಾಗಿದೆ.

ವಿವಾಹಿತ ವ್ಯಕ್ತಿಯ ವರ್ತನೆಯಿಂದ ಮನನೊಂದ ವಿದ್ಯಾರ್ಥಿನಿ, ಶನಿವಾರ ಮನೆಯ ಫ್ಯಾನ್‍ಗೆ ನೇಣು ಹಾಕಿಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Leave a Reply

Your email address will not be published. Required fields are marked *