Thursday, 24th May 2018

ಪ್ರತಾಪ್ ಸಿಂಹ ಗೆಲುವಿಗೆ ಎಸ್‍ಡಿಪಿಐ ಕಾರಣ: ಯುಟಿ ಖಾದರ್

ಚಾಮರಾಜನಗರ: ಚುನಾವಣೆ ಸಂದರ್ಭದಲ್ಲಿ ಎಸ್‍ಡಿಪಿಐ ಮತ್ತು ಬಿಜೆಪಿ ಅವರು ಒಂದಾಗುತ್ತಾರೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಹಳಷ್ಟು ಜನರ ಗೆಲುವಿಗೆ ಆ ಸಂಘನೆಗಳು ಕಾರಣ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್‍ಡಿಪಿಐ, ಪಿಎಫ್‍ಐ, ಭಜರಂಗದಳ ಇವು ರಾಷ್ಟ್ರೀಯ ಸಂಘಟನೆಗಳು, ಈ ರಾಷ್ಟ್ರೀಯ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡುವುದು ಹೇಗೆ ಸಾಧ್ಯ? ಆ ಸಂಘಟನೆಗಳನ್ನ ರಾಜ್ಯ ಸರ್ಕಾರ ಬ್ಯಾನ್ ಮಾಡಿ ಎಂದು ಹೇಳುತ್ತಾ ಜನರನ್ನು ಬಿಜೆಪಿ ನಾಯಕರು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದೇಶದ್ರೋಹಿ, ಕೊಲೆಮಾಡುವಂತ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಲಿ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಆ ಸಂಘಟನೆಗಳನ್ನು ಬ್ಯಾನ್ ಮಾಡಲು ಧೈರ್ಯ ಇಲ್ಲ. ಈಗ ಬಿಜೆಪಿಯವರೇ ಆ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಚುನಾವಣೆ ವೇಳೆ ಅವರನ್ನು ನಮ್ಮ ವಿರುದ್ಧ ಎತ್ತಿಕಟ್ಟಿ ನಿಲ್ಲಿಸುತ್ತಾರೆ. ಇಲ್ಲಿರುವ ಬಿಜೆಪಿ ಸಂಘಟನೆಗಳು ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಕರ್ತವ್ಯ ನಮ್ಮದು ಎಂದು ಹೇಳುವ ಮೂಲಕ ಸರ್ಕಾರದ ನಡೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು.

ಬೈಕ್ ರ‍್ಯಾಲಿ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂಬ ಕಾರಣದಿಂದ ಅನುಮತಿ ನೀಡಿರಲಿಲ್ಲ. ಮಂಗಳೂರಲ್ಲಿ ಅವರು ಪ್ರತಿಭಟನೆ ಮಾಡಿಕೊಳ್ಳಲಿ. ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲೆಯನ್ನು ಇಬ್ಬಾಗ ಮಾಡದಿರಲಿ ಎಂದು ಹೇಳಿದರು.

Leave a Reply

Your email address will not be published. Required fields are marked *