Thursday, 21st June 2018

Recent News

ನವಜೀವನಕ್ಕೆ ಕಾಲಿಟ್ಟ ಭಾರತ ಹಾಕಿ ತಂಡದ ಉಪನಾಯಕ ಎಸ್.ವಿ ಸುನೀಲ್

ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನಿಶಾ ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

ವಿಶ್ವಕರ್ಮ ಸಮುದಾಯದ ಪದ್ಧತಿಯಂತೆ ಮದುವೆ ಕಾರ್ಯಕ್ರಮ ನಡೆದಿದ್ದು, ಸೀಮಿತ ಸಂಖ್ಯೆಯಲ್ಲಿ ಬಂಧು-ಮಿತ್ರರು, ಸ್ನೇಹಿತರು ಹಾಗೂ ಹಾಕಿ ತಂಡದ ಐವರು ಮಿತ್ರರು ಪಾಲ್ಗೊಂಡಿದ್ದರು. ಸೋಮವಾರ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ ಹಾಕಿ ತಂಡದ ಆಟಗಾರರು, ಮಾಜಿ ಆಟಗಾರರಾದ ಅರ್ಜುನ್ ಹಾಲಪ್ಪ, ಧನರಾಜ್ ಪಿಳೈ, ಎ.ಬಿ.ಸುಬ್ಬಯ್ಯ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ಸುಮಾರು ಎರಡೂವರೆ ಸಾವಿರ ಮಂದಿಗೆ ಆರತಕ್ಷತೆಗೆ ಆಮಂತ್ರಣ ನೀಡಲಾಗಿದ್ದು, ಎಲ್ಲಾ ಸಿದ್ಧತೆ ಮಾಡಲಾಗಿದೆ. ಮಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಸ್ನೇಹಿತರು ಸುನೀಲ್ ಅವರಿಗೆ ಅಚ್ಚರಿ ನೀಡಿ ಸ್ಟೇಜ್ ನಲ್ಲಿ ಸ್ಟೆಪ್ ಹಾಕಿ ಸಂಭ್ರಮಿಸಿದ್ದಾರೆ.

Leave a Reply

Your email address will not be published. Required fields are marked *