ಮಂಗಳೂರಲ್ಲಿ ಆರ್‍ಎಸ್‍ಎಸ್ ಮುಖಂಡನ ಹತ್ಯೆಗೆ ಯತ್ನ


ಮಂಗಳೂರು: ಬೆಂಗಳೂರಿನ ರುದ್ರೇಶ್ ಕೊಲೆ, ಮೈಸೂರಿನ ಮಾಗಳಿ ರವಿ ಅನುಮಾನಾಸ್ಪದ ಸಾವು ಪ್ರಕರಣಗಳು ಮಾಸುವ ಮುನ್ನೆವೇ ಮಂಗಳೂರಲ್ಲಿ ಆರ್‍ಎಸ್‍ಎಸ್ ಮುಖಂಡನ ಹತ್ಯೆಗೆ ವಿಫಲ ಯತ್ನ ನಡೆದಿದೆ.

ಉಳ್ಳಾಲದ ಕುತ್ತಾರಿನ ಭಂಡಾರಬೈಲು ಆರ್‍ಎಸ್‍ಎಸ್ ಮುಖಂಡ ರಾಮ್‍ಮೋಹನ್ ಎಂಬವರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಮೂವರ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿದೆ. ತಲ್ವಾರ್‍ನಿಂದ ರಾಮ್‍ಮೋಹನ್ ತಲೆಗೆ ಹೊಡೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

mng-murder-attempt

ಅದೃಷ್ಟವಶಾತ್ ರಾಮ್‍ಮೋಹನ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ಶಿವಾಜಿನಗರದ ಬಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೈಸೂರಿನ ಬಿಜೆಪಿ ಕಾರ್ಯಕರ್ತ ಮಾಗಳಿ ರವಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಬೀದರ್‍ನಲ್ಲಿ 34 ವರ್ಷದ ಬಿಜೆಪಿ ಕಾರ್ಯಕರ್ತ ಸುನಿಲ್ ಡೋಂಗ್ರೆ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಮೈಸೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಅನುಮಾನಾಸ್ಪದ ಸಾವು, ಕೊಲೆ ಶಂಕೆ ವ್ಯಕ್ತಪಡಿಸಿದ ಬಿಜೆಪಿ

loading...

LEAVE A REPLY