Tuesday, 24th April 2018

Recent News

ರಂಗೇರಿದೆ ಉಪ ಚುನಾವಣಾ ಸಮರ – ಪ್ರಮುಖರಿಂದ ಇಂದೇ ನಾಮಪತ್ರ

– ಬಲಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ ನಂಜನಗೂಡು, ಗುಂಡ್ಲುಪೇಟೆ

ಮೈಸೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣಾ ರಂಗೇರಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಳೆ ಮಂಗಳವಾರ ಆದ ಕಾರಣ ಬಹುತೇಕ ಅಭ್ಯರ್ಥಿಗಳು ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ.

ನಂಜನಗೂಡಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಹಾಗೂ ಗುಂಡ್ಲುಪೇಟೆ ಮತಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೀತಾ ಮಹದೇವಪ್ರಸಾದ್, ಬಿಜೆಪಿಯಿಂದ ನಿರಂಜನ್ ಕುಮಾರ್ ತಮ್ಮ ನಾಯಕರು ಹಾಗೂ ಬೆಂಬಲಿಗರ ಜೊತೆಗೆ ಮೆರವಣಿಗೆಯಲ್ಲಿ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಎಲ್ಲಾ ಅಭ್ಯರ್ಥಿಗಳು ತಮ್ಮ ಬಲ ಪ್ರದರ್ಶನ ಮಾಡಲಿದ್ದಾರೆ.

ನಾಮಪತ್ರ ಹಿಂಪಡೆಯಲು ಮಾರ್ಚ್ 24 ಕೊನೆಯ ದಿನವಾಗಿದ್ದು, ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಏಪ್ರಿಲ್ 13ರಂದು ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *