Tuesday, 24th April 2018

ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗದಿರುವುದಕ್ಕೆ ಬಿಜೆಪಿಯೇ ನೇರ ಕಾರಣ: ಎನ್‍ಸಿಪಿ ಮುಖಂಡ ತ್ರಿಪಾಠಿ

ಬೆಂಗಳೂರು: ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ. ಇದಕ್ಕೆಲ್ಲ ಬಿಜೆಪಿಯೇ ನೇರ ಕಾರಣ. ಚುನಾವಣೆ ಸಮಯದಲ್ಲಿಯೇ ಆರ್ಥಿಕ ಪರಿಸ್ಥಿತಿ ಕುಸಿತ ಕಂಡಿದೆ ಎಂದು ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ದೇವಿ ಪ್ರಸಾದ ತ್ರಿಪಾಠಿ ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ಬಾರಿಯ ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು. ಇದಕ್ಕಾಗಿ ಎನ್‍ಸಿಪಿಯಿಂದ ಕೈ ಬಲಪಡಿಸುವ ಕೆಲಸ ಮಾಡಲಾಗುತ್ತದೆ ಎಂದು ಅವರು ಬಹಿರಂಗವಾಗಿ ಕಾಂಗ್ರೆಸ್‍ಗೆ ಬೆಂಬಲ ಸೂಚಿಸಿದ್ದಾರೆ.

ಸಿದ್ದರಾಮಯ್ಯ ದೇಶದ ನಂಬರ್ ಒನ್ ಮುಖ್ಯಮಂತ್ರಿಯಾಗಿದ್ದು, ಅನ್ನಭಾಗ್ಯ, ಕೃಷಿ ಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ರಾಜ್ಯದ ಜನರಿಗೆ ನೀಡಿದ್ದಾರೆ. ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು. ಹೀಗಾಗಿ ನಾವು ಬೆಂಬಲ ಘೋಷಿಸುತ್ತಿದ್ದೇವೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *