ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಲೆ ಈಗಲೂ ದೇಶದಲ್ಲಿ ಮುಂದುವರಿದಿದ್ದು, ಒಂದು ವೇಳೆ ಈಗ ಚುನಾವಣೆ ನಡೆದರೆ ಎನ್ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆಲ್ಲಲಿದೆ ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ.
ಒಟ್ಟು 543 ಕ್ಷೇತ್ರಗಳಲ್ಲಿ ಎನ್ಡಿಎ ಮೈತ್ರಿಕೂಟ 335 ಸ್ಥಾನಗಳನ್ನು ಗೆದ್ದರೆ ಯುಪಿಎ 89 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಿಪಬ್ಲಿಕ್ ಸಿ ವೋಟರ್ ಸಮೀಕ್ಷೆ ತಿಳಿಸಿದೆ. ಇದನ್ನೂ ಓದಿ : ಹೊಸ ವರ್ಷಕ್ಕೆ ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ-ಕರ್ನಾಟಕ ಮತದಾರರ ಮನದಾಳದ ಉತ್ತರ ಇಲ್ಲಿದೆ
ಕರ್ನಾಟಕದಲ್ಲಿ ಏನು?
ಕರ್ನಾಟಕದಲ್ಲಿ 22(+5) ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ ಕಾಂಗ್ರೆಸ್ 5(-4) ಇತರೇ 1(-1) ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ತಿಳಿಸಿದೆ. ಒಂದು ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಈ ಮೈತ್ರಿಕೂಟ 17 ಸ್ಥಾನಗಳನ್ನು ಪಡೆದರೆ ಬಿಜೆಪಿ 11 ಸ್ಥಾನಗಳನ್ನು ಪಡೆಯಲಿದೆ ಸಮೀಕ್ಷೆ ಹೇಳಿದೆ. ಬಿಜೆಪಿ 45.2%, ಕಾಂಗ್ರೆಸ್ 36.5%, ಜೆಡಿಎಸ್ 15.6% ಮತಗಳನ್ನು ಪಡೆಯಲಿದೆ. 2014 ರಲ್ಲಿ ಬಿಜೆಪಿ 43.1%, ಕಾಂಗ್ರೆಸ್ 40.9%, ಜೆಡಿಎಸ್ 15.6% ಮತಗಳನ್ನು ಪಡೆದಿತ್ತು. ಇದನ್ನೂ ಓದಿ : ಯಾರಿಗೂ ಬಹುಮತವಿಲ್ಲ, ಮತ್ತೊಮ್ಮೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ!