Wednesday, 20th June 2018

Recent News

ಎರಡು ಮೂರು ದಿನದಲ್ಲಿ ಖಾತೆ ಬದಲಾವಣೆ ಆಗಲಿದೆ: ಜಿ.ಟಿ.ದೇವೇಗೌಡ

ಬೆಂಗಳೂರು: ಉನ್ನತ ಶಿಕ್ಷಣ ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಜಿಟಿ ದೇವೇಗೌಡರು ಇನ್ನು ಎರಡು ಮೂರು ದಿನದಲ್ಲಿ ಖಾತೆ ಬದಲಾವಣೆ ಆಗಲಿದೆ ಎಂದು ತಿಳಿಸಿದ್ದಾರೆ.

ಖಾತೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಜಿಟಿ ದೇವೇಗೌಡ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದಾರೆ. ಜನರಿಗೆ ಹತ್ತಿರ ಇರೋ ಖಾತೆ ಕೊಡುವಂತೆ ಕೇಳಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ. ಇನ್ನೂ ಎರಡು ಮೂರು ದಿನದಲ್ಲಿ ಖಾತೆ ಬದಲಾವಣೆ ಆಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ತಿಳಿಸಿದರು.

ಮುಂದಿನ ಬಜೆಟ್ ನಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚು ಒತ್ತು ನೀಡುವಂತೆ ಪ್ರಸ್ತಾಪ ಮಾಡಿದ್ದೇನೆ. ಕಬಿನಿಯಿಂದ ಮೈಸೂರು ನಗರ ಹಾಗೂ ಸುತ್ತಮುತ್ತಲ ಹಳ್ಳಿಗಳಿಗೆ ಕುಡಿಯುವ ನೀರು ತರುವ ಬಗ್ಗೆ ಚರ್ಚೆ ಮಾಡಿದ್ದೇವೆ. ಮೈಸೂರು ಉಸ್ತುವಾರಿ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಜಿಟಿಡಿ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ರೈತರಿಗೆ ಹತ್ತಿರ ಇರೋ ಖಾತೆ ಕೊಡುವಂತೆ ಈ ಹಿಂದೆ ಕೂಡ ಜಿಟಿಡಿ ಅವರು ಮನವಿ ಮಾಡಿದ್ದರು.ಇದನ್ನೂ ಓದಿ: ಜಿಟಿಡಿಗೆ ಖಾತೆ ಬದಲಾವಣೆ?- ಎಚ್‍ಡಿಡಿ ಜೊತೆ ಸಿಎಂ ಮಾತುಕತೆ

Leave a Reply

Your email address will not be published. Required fields are marked *