Saturday, 24th March 2018

Recent News

ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅಪಘಾತ – 67 ಪ್ರಯಾಣಿಕರಿದ್ದ ವಿಮಾನಕ್ಕೆ ಬೆಂಕಿ

ಕಠ್ಮಂಡು: 67 ಪ್ರಯಾಣಿಕರಿದ್ದ ಬಾಂಗ್ಲಾದೇಶದ ಯುಎಸ್-ಬಾಂಗ್ಲಾ ಏರ್ ಲೈನ್ಸ್ ನ ವಿಮಾನ ಇಂದು ನೇಪಾಳದ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿ ನಾಲ್ವರು ಸಿಬ್ಬಂದಿ ಹಾಗೂ 67 ಪ್ರಯಾಣಿಕರಿದ್ದರು. ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ವಿಮಾನ ಅಪಘಾತಕ್ಕೀಡಾಗಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿದೆ.

ವಿಮಾನದಲ್ಲಿದ್ದ 17 ಮಂದಿಯನ್ನ ರಕ್ಷಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಳಿದ ಪ್ರಯಾಣಿಕರ ಸ್ಥಿತಿ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ ಎಂದು ವಿಮಾನ ನಿಲ್ದಾಣ ವಕ್ತಾರರಾದ ಬೀರೇಂದ್ರ ಪ್ರಸಾದ್ ಶ್ರೇಷ್ಠ ಹೇಳಿದ್ದಾರೆ.

ಬೆಂಕಿಯನ್ನ ನಿಯಂತ್ರಣಕ್ಕೆ ತರಲು ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಎಂದು ಅವರು ಹೇಳಿದ್ದಾರೆ.

ವಿಮಾನವು ರನ್‍ವೇ ನಲ್ಲಿ ಲ್ಯಾಂಡ್ ಆಗುವ ವೇಳೆ ವಿಮಾನ ನಿಲ್ದಾಣದ ಬಳಿ ಇರೋ ಫುಟ್‍ಬಾಲ್ ಮೈದಾನದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *