Wednesday, 21st March 2018

Recent News

ಬರಿಗಾಲಲ್ಲಿ ಸಾವಿರ ಮೆಟ್ಟಿಲು ಹತ್ತಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ಪುನೀತ್ ರಾಜ್‍ಕುಮಾರ್

ಮೈಸೂರು: ಸ್ಯಾಂಡಲ್‍ವುಡ್ ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಇಂದು ನಗರದ ಮಹಿಳಾ ಪುರ್ನವಸತಿ ಶಕ್ತಿಧಾಮದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆಂದು ಪುನೀತ್ ರಾಜ್‍ಕುಮಾರ್ ಭೇಟಿ ನೀಡಿದ್ದರು. ಶಕ್ತಿಧಾಮದಲ್ಲಿ ಕಾರ್ಯಕ್ರಮ ಮುಗಿದ ಬಳಿಕ ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ್ದಾರೆ.

ಪುನೀತ್ ರಾಜ್ ಕುಮಾರ ಬರಿಗಾಲಲ್ಲಿ ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಿಲು ಹತ್ತಿದ್ದು, ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ್ದಾರೆ. ದೇವಾಸ್ಥಾನಕ್ಕೆ ಪುನೀತ್ ನ ದಿಢೀರ್ ಭೇಟಿ ಕಂಡು ಅಭಿಮಾನಿಗಳು ತುಂಬಾ ಖುಷಿ ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಬೆಟ್ಟ ಹತ್ತಿ ಇಳಿಯುವವರೆಗೂ ಜೊತೆಯಲ್ಲಿ ಸಾಥ್ ನೀಡಿದ್ದಾರೆ.

Leave a Reply

Your email address will not be published. Required fields are marked *