ಬೆಂಗಳೂರು: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮೇಕಪ್ ಮಾಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗುರುವಾರ ಈ ವಿಡಿಯೋವನ್ನು ಪ್ರಿಯಾ ಪ್ರಕಾಶ್ ವಾರಿಯರ್ ಅಪ್ಲೋಡ್ ಮಾಡಿಕೊಂಡಿದ್ದಾರೆ. `ಒರು ಅಡಾರ್ ಲವ್’ ಸಿನಿಮಾದ ಶೂಟಿಂಗ್ ಮೇಕಪ್ ವಿಡಿಯೋ ಎಂದು ಪ್ರಿಯಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್ಗೆ ಸೆಡ್ಡು ಹೊಡೆಯಲು ಇಂಟರ್ ನ್ಯಾಷನಲ್ ಕ್ರಶ್ರನ್ನು ಕರೆತರಲಿದ್ದಾರೆ ಪ್ರಥಮ್!
ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿರೋ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ್ದಾರೆ. ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯನ್ನ ಕೇವಲ ಒಂದೇ ದಿನದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದರು. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಫಾಲೋ ಆಗಿರುವ ವಿಶ್ವದ ಮೂರನೇ ಸೆಲೆಬ್ರಿಟಿ ಎನ್ನುವ ಹೆಗ್ಗಳಿಕೆಗೆ ಪ್ರಿಯಾ ಪಾತ್ರರಾಗಿದ್ದರು. ಇದನ್ನೂ ಓದಿ: ಕನ್ನಡಕ್ಕೆ ಬರ್ತಾಳಂತೆ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್!
https://www.instagram.com/p/BhvTZwXDoX0/