Thursday, 24th May 2018

ಹಬ್ಬಕ್ಕೆ ರಜೆ ಪಡೆದು ಗ್ರಾಮಕ್ಕೆ ಬಂದಿದ್ದ ಯೋಧ ಗಣಪತಿ ವಿಸರ್ಜನೆ ವೇಳೆ ನೀರುಪಾಲು

ಹಾಸನ: ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಯೋಧರೊಬ್ಬರು ನೀರು ಪಾಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ದ್ಯಾವಲಾಪುರ ಗ್ರಾಮದ ಕೆರೆಯ ಬಳಿ ಈ ಘಟನೆ ನಡೆದಿದೆ. ಯೋಧ ಲೋಕೇಶ್ ಮೃತ ದುರ್ದೈವಿಯಾಗಿದ್ದು, ಇವರು ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದ್ದಾರೆ. ಸದ್ಯ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಾಯದೊಂದಿಗೆ ಹೊರತೆಗೆಯಲಾಗಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಹಬ್ಬಕ್ಕಾಗಿ ರಜೆ ಪಡೆದು ಗ್ರಾಮಕ್ಕೆ ಬಂದಿದ್ದ ಲೋಕೇಶ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇದೀಗ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಜಿಲ್ಲೆಯಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಎರಡನೇ ಅವಘಡವಾಗಿದ್ದು ನಿನ್ನೆ ಚನ್ನರಾಯಪಟ್ಟಣದ ಶೆಟ್ಟಿಗೌಡನಹಳ್ಳಿ ಹರೀಶ್ ಎಂಬ ಯುವಕ ಮೃತಪಟ್ಟಿದ್ದರು.

Leave a Reply

Your email address will not be published. Required fields are marked *