ಇನ್ನು ಮುಂದೆ ವಾಟ್ಸಪ್‍ನಲ್ಲೂ ಹಣ ಸೆಂಡ್ ಮಾಡಬಹುದು!

ನವದೆಹಲಿ: ಮೆಸೇಜ್, ಫೋಟೋ, ವಿಡಿಯೋಗಳನ್ನು ಇಲ್ಲಿಯವೆಗೆ ಸೆಂಡ್ ಮಾಡುತ್ತಿದ್ದ ನೀವು ಇನ್ನು ಮುಂದೆ ವಾಟ್ಸಪ್‍ನಲ್ಲಿ ಹಣವನ್ನು ಕಳುಹಿಸಬಹುದು.

ಹೌದು. ವಾಟ್ಸಪ್ ಕಂಪೆನಿ ತನ್ನ ಬಳಕೆದಾರರಿಗೆ ಆ್ಯಪ್ ಮೂಲಕವೇ ಹಣವನ್ನು ವರ್ಗಾವಣೆ ಮಾಡುವ ವಿಶೇಷತೆಯನ್ನು ಸೇರಿಸಲು ಮುಂದಾಗುತ್ತಿದೆ.

ಈ ಸಂಬಂಧವಾಗಿ ವಾಟ್ಸಪ್ ಕಂಪೆನಿ ಜಾಹಿರಾತು ಪ್ರಕಟಿಸಿದ್ದು, ಯುನಿಫೈಡ್ ಪೇಮೆಂಟ್ ಇಂಟರ್‍ಫೇಸ್(ಯುಪಿಐ) ಭೀಮ್ ಆ್ಯಪ್ ಮತ್ತು ಆಧಾರ್ ನಂಬರ್ ಇವುಗಳಲ್ಲಿ ಪರಿಣಿತಿ ಹೊಂದಿರುವ ಅಭ್ಯರ್ಥಿಗಳನ್ನು ಹುಡುಕುತ್ತಿರುವುದಾಗಿ ತಿಳಿಸಿದೆ. ಅಕ್ಟೋಬರ್ ಒಳಗಡೆ ಈ ವಿಶೇಷತೆ ವಾಟ್ಸಪ್ ಗ್ರಾಹಕರಿಗೆ ಲಭ್ಯವಾಗಲಿದೆ ಎಂದು ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.

ನವೆಂಬರ್ 8ರಂದು ಕೇಂದ್ರ ಸರ್ಕಾರ 1 ಸಾವಿರ ಮತ್ತು 500 ರೂ. ನೋಟುಗಳನ್ನು ನಿಷೇಧಗೊಳಿಸಿದ ಬಳಿಕ ಭಾರತದಲ್ಲಿ ಡಿಜಿಟಲ್ ಪಾವತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಟ್ಸಪ್ ಈಗ ಈ ಕ್ಷೇತ್ರದತ್ತ ಕಣ್ಣುಹಾಕಿದೆ.

ವಾಟ್ಸಪ್ 8ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆ ವಾಟ್ಸಪ್ ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮಾತನಾಡಿದ್ದರು. ಈ ವೇಳೆ ಈ ವೇಳೆ ಬುಸಿನೆಸ್ ಕ್ಷೇತ್ರವನ್ನು ಹೇಗೆ ವಿಸ್ತರಿಸುತ್ತೀರಿ ಎನ್ನುವ ಪ್ರಶ್ನೆಗೆ, ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಅಳವಡಿಸಲು ಚಿಂತನೆ ನಡೆದಿದೆ. ವಿಚಾರದ ಬಗ್ಗೆ ಪ್ರಾಥಮಿಕ ಹಂತದ ಮಾತುಕತೆ ನಡೆಯುತ್ತಿದೆ, ಭಾರತೀಯ ಬಳಕೆದಾರರಿಗೆ ಕೆಲಸ ಮಾಡುವುದು ಸಂತದ ತಂದಿದೆ ಎಂದು ಅವರು ತಿಳಿಸಿದ್ದರು.

2009 ಫೆಬ್ರವರಿ 9ರಂದು ಆರಂಭಗೊಂಡ ವಾಟ್ಸಪ್ ಕಂಪೆನಿಯನ್ನು 19 ಶತಕೋಟಿ ಡಾಲರ್ ನೀಡಿ ಫೇಸ್‍ಬುಕ್ 2014ರಲ್ಲಿ ಖರೀದಿಸಿದೆ. ಯಾವುದೇ ಕಾರಣಕ್ಕೂ ಜಾಹೀರಾತುಗಳನ್ನು ತೋರಿಸುವುದಿಲ್ಲ ಎಂದು ವಾಟ್ಸಪ್ ಹೇಳಿಕೊಂಡಿದೆ. ಪ್ರಸ್ತುತ ವಿಶ್ವದಲ್ಲಿ ಪ್ರತಿ ತಿಂಗಳು 102 ಕೋಟಿ ಸಕ್ರೀಯ ಬಳಕೆದಾರರಿದ್ದು, ಭಾರತದಲ್ಲೇ 20 ಕೋಟಿ ಮಂದಿ ವಾಟ್ಸಪ್ ಬಳಸುತ್ತಿದ್ದಾರೆ.

ಫೆಬ್ರವರಿ 24ರಂದು ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಬ್ರಿಯಾನ್ ಆಕ್ಟನ್ ಭೇಟಿ ಮಾಡಿ ‘ಡಿಜಿಟಲ್ ಇಂಡಿಯಾ’  ವಿಚಾರದ ಬಗ್ಗೆ ಮಾತುಕತೆ ನಡೆಸಿದ್ದರು.

ವಾಟ್ಸಪ್ ಪ್ರಕಟಿಸಿರುವ ಜಾಹಿರಾತು

You might also like More from author

Leave A Reply

Your email address will not be published.

badge