Monday, 25th June 2018

Recent News

ಅತೀ ವೇಗದ ಕಾರ್ ಚಾಲನೆಯಿಂದ 8 ತಿಂಗಳ ಗರ್ಭಿಣಿ ದಾರುಣ ಸಾವು!

ನೊಯ್ಡಾ: ವ್ಯಕ್ತಿಯೊಬ್ಬ ತನ್ನ ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ 8 ತಿಂಗಳ ಗರ್ಭಿಣಿ ಹಾಗೂ ಆಕೆಯ ಪತಿಗೆ ಗುದ್ದಿದ ಘಟನೆ ನಡೆದಿರುವುದಾಗಿ ಬೆಳಕಿಗೆ ಬಂದಿದೆ.

ಈ ಘಟನೆ ನೊಯ್ಡಾದಲ್ಲಿ ಭಾನುವಾರ ರಾತ್ರಿ ನಡೆದಿದೆ. ಘಟನೆಯಿಂದ ಗರ್ಭಿಣಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಪತಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.

ಘಟನೆಯಲ್ಲಿ ತಾಯಿಗೆ ಗಂಭೀರ ಗಾಯಗಳಾಗಿದ್ದರಿಂದ 8 ತಿಂಗಳ ಭ್ರೂಣವನ್ನು ಕೂಡ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಅಂತ ವೈದ್ಯರು ತಿಳಿಸಿದ್ದಾರೆ. ತಾನು ಪಾರ್ಕ್ ಮಾಡಿದ್ದ ಸ್ಥಳದಿಂದ ಕಾರನ್ನು ವೇಗವಾಗಿ ಹಿಂದಕ್ಕೆ ತೆಗೆದುಕೊಂಡಿದ್ದಾನೆ. ಪರಿಣಾಮ ಕಾರಿನ ನಿಯಂತ್ರಣ ತಪ್ಪಿ ದಂಪತಿಗೆ ಡಿಕ್ಕಿ ಹೊಡೆದಿದೆ.

ಭಾನುವಾರ ರಜಾ ದಿನವಾದ್ದರಿಂದ ದಂಪತಿ ಸಂಜೆ ಶಾಪಿಂಗ್ ಗೆಂದು ಸೆಕ್ಟರ್ 18ರ ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಕಾರು ಸಮೇತ ಚಾಲಕನನ್ನು ಪೊಲೀಸರು ಬಂಧಿಸಿದ್ದು ತನಿಖೆ ಮುಂದುವರೆದಿದೆ ಅಂತ ನೊಯ್ಡಾ ಪೊಲೀಸ್ ಅಧಿಕಾರಿ ಶ್ವೇತಂಬರ್ ಪಾಂಡೇ ಮಾಧ್ಯಮಕ್ಕೆ ತಿಳಿಸಿದ್ರು.

Leave a Reply

Your email address will not be published. Required fields are marked *