Sunday, 25th June 2017

Recent News

3 days ago

ಈ ಊರಿನ ಜನ್ರಿಗೆ ಚಿಕೂನ್ ಗುನ್ಯಾ- ಚುನಾವಣೆಯಲ್ಲಿ ವೋಟ್ ಕೊಡಿ, ನೀರು ಕೊಡ್ತೀವಿ ಎಂದ ಕಾಂಗ್ರೆಸ್ ನಾಯಕರು ನಾಪತ್ತೆ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಸುಮಾರು 1000ಕ್ಕೂ ಅಧಿಕ ಜನರು ಚಿಕೂನ್ ಗುನ್ಯಾ ರೋಗದಿಂದ ಬಳಲುತ್ತಿದ್ದಾರೆ. ಇದುವರೆಗೂ ಯಾವ ಆರೋಗ್ಯ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಕಲುಷಿತ ನೀರಿನ ಸೇವನೆಯಿಂದ ಗ್ರಾಮಸ್ಥರು ಚಿಕೂನ್ ಗುನ್ಯಾದಿಂದ ಬಳಲುವಂತಾಗಿದೆ. ಗುಂಡ್ಲುಪೇಟೆ ಉಪಚುನಾವಣೆಯ ವೇಳೆಯಲ್ಲಿ ಗ್ರಾಮಕ್ಕೆ ಬಂದಿದ್ದ ಎಲ್ಲ ರಾಜಕೀಯ ನಾಯಕರು ನಮಗೆ ವೋಟ್ ಕೊಡಿ, ನಾವು ನಿಮಗೆ ನೀರು ಕೊಡ್ತೀವಿ ಅಂತಾ ಭರವಸೆಗಳನ್ನು ನೀಡಿದ್ದರು. ಆದ್ರೆ ಚುನಾವಣೆ ಗೆಲುವಿನ ಬಳಿಕ ಯಾವ ಕಾಂಗ್ರೆಸ್ ಅಧಿಕಾರಿಗಳು ಇತ್ತ ಸುಳಿದಿಲ್ಲ […]

2 weeks ago

ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ 25 ಕುಟುಂಬಗಳಿಗೆ ಬಹಿಷ್ಕಾರ

ಚಾಮರಾಜನಗರ: ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಹಾಕಿದ್ದಕ್ಕೆ 25 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹೇರಿರುವ ಅಮಾನವೀಯ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಾಲಾಪುರ ಗ್ರಾಮದ 25 ಕುಟುಂಬದ ಮತದಾರರು ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಈ ಬಹಿಷ್ಕಾರದಿಂದ ಕಂಗಾಲಗಿರುವ 25 ಕುಟುಂಬಗಳು ಈ...

2018ರ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಯಾರಿ – ಹೈಟೆಕ್ ಆದ ಸಿಎಂ ಸಿದ್ದರಾಮಯ್ಯ

2 months ago

– ಸಾಧನೆಗಳ ಪ್ರಚಾರಕ್ಕೆ ವಿನೂತನ ಸ್ಟುಡಿಯೋ ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿತ್ತು. ಇದೀಗ 2018ರ ಎಲೆಕ್ಷನ್ ಗೆ ಹೊಸ ಐಡಿಯಾದೊಂದಿಗೆ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ರೆಡಿಯಾಗಿದೆ. ಯೆಸ್, ಸಿಎಂ ಸಿದ್ದರಾಮಯ್ಯ 2018ರ ದಾರಿಯನ್ನೇ...

ಬೇರೆ ಪಕ್ಷಗಳ ತಂತ್ರಗಾರಿಕೆಗೆ ತಲೆಕೆಡಿಸಿಕೊಳ್ಳಲ್ಲ: ಬಿಎಸ್‍ವೈ

2 months ago

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಿಷನ್ 150 ಗುರಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬೇರೆ ಪಕ್ಷಗಳ ತಂತ್ರಗಾರಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು...

ಕಾಶ್ಮೀರದಲ್ಲಿ ಜೀಪ್‍ಗೆ ವ್ಯಕ್ತಿಯನ್ನ ಕಟ್ಟಿದ ಪ್ರಕರಣ – ಸೇನೆ ವಿರುದ್ಧ ಎಫ್‍ಐಆರ್

2 months ago

ಶ್ರೀನಗರ: ಕಳೆದ ವಾರ ಉಪಚುನಾವಣೆ ವೇಳೆ ಪ್ರತಿಭಟನಕಾರರ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಭದ್ರತಾ ಪಡೆ ವ್ಯಕ್ತಿಯೊಬ್ಬರನ್ನು ಜೀಪ್‍ಗೆ ಕಟ್ಟಿದ ಆರೋಪದ ಮೇಲೆ ಸೇನೆಯ ವಿರುದ್ಧ ಜಮ್ಮು ಕಾಶ್ಮೀರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಕಲ್ಲು ತೂರಾಟದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಸೇನಾ ಪಡೆ ವ್ಯಕ್ತಿಯೊಬ್ಬರನ್ನು...

ಗುಂಡ್ಲುಪೇಟೆ, ನಂಜನಗೂಡಲ್ಲಿ ಬಿಜೆಪಿಗೆ ಹಿನ್ನಡೆ – ಸೋಲಿಗೆ ಕಾರಣ ಕೊಡುವಂತೆ ಉಸ್ತುವಾರಿಗಳಿಗೆ ಸೂಚನೆ

2 months ago

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿ, ಪ್ರತಿಷ್ಠೆಯ ಪ್ರಶ್ನೆ ಎಂದೇ ಪರಿಗಣಿಸಲಾಗಿದ್ದ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಕಮಲ ಪಾಳಯ ಈಗ ಕಾರಣ ಹುಡುಕಲು ಮುಂದಾಗಿದೆ. ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಪರಾಭವಕ್ಕೆ ಮೂಲವಾಗಿದ್ದು ಏನು ಎಂಬ ಬಗ್ಗೆ...

ದೇಶ ಕಟ್ಟಿದ್ದು, ಬೆಳೆಸಿದ್ದು ಕಾಂಗ್ರೆಸ್, ಸರ್ಕಾರದ ಅಭಿವೃದ್ಧಿಗೆ ಜನ್ರ ಮತ: ಆಂಜನೇಯ

2 months ago

ಬೆಂಗಳೂರು: ವಿಧಾನಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಕಾಂಗ್ರೆಸ್ ಮೇಲೆ ಸಾಕಷ್ಟು ಅಪಪ್ರಚಾರ ನಡೆಸಲಾಗಿತ್ತು. ಜನರು ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ಜನ ಯಾವುದಕ್ಕೂ ಕಿವಿಗೊಡದೆ ಕಾಂಗ್ರೆಸ್‍ಗೆ ಮತಹಾಕಿದ್ದಾರೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರದ ಅಭಿವೃದ್ಧಿ ಗೆ ಮತದಾರರು ಮಣೆ ಹಾಕಿದ್ದಾರೆ ಅಂತಾ ಸಚಿವ...

ಗುಂಡ್ಲುಪೇಟೆಯಲ್ಲಿ ಈ ಬಾರಿ ಯಾರಿಗೆ ಎಷ್ಟು ವೋಟ್ ಬಿದ್ದಿದೆ? ಕಳೆದ ಬಾರಿ ಯಾರಿಗೆ ಎಷ್ಟು ಬಿದ್ದಿತ್ತು?

2 months ago

ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಚುನಾವಣೆಯಲ್ಲಿ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್ ಗೆದ್ದಿದ್ದರೂ ನೋಟಾ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.ಗೀತಾ ಮಹದೇವಪ್ರಸಾದ್ ಅವರಿಗೆ 90,258 ಮತಗಳು ಬಿದ್ದರೆ, ಬಿಜೆಪಿ ನಿರಂಜನ್ ಕುಮಾರ್‍ಗೆ 79,382 ಮತಗಳು ಬಿದ್ದಿವೆ. ಆದರೆ 1596 ಮಂದಿ ನೋಟಾ ಒತ್ತಿದ್ದಾರೆ. ಏಪ್ರಿಲ್ 9ರಂದು ನಡೆದ...