Monday, 22nd January 2018

10 hours ago

ದಾವಣಗೆರೆಯಲ್ಲಿ ಕಾಲುವೆಗೆ ಉರುಳಿಬಿತ್ತು ಸ್ವಿಫ್ಟ್ ಕಾರು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ತುಂಗಭದ್ರಾ ನಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಇಂದು ನಸುಕಿನ ಜಾವ ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕ್ರೇನ್ ಮೂಲಕ ಕಾರು ಮೇಲೆತ್ತಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

6 days ago

ಕಾರಿನಲ್ಲಿ ಸೆಕ್ಸ್, ಲವ್ವರ್ ಕೊಲೆ- ನಗ್ನ ದೇಹವನ್ನ ಪೋಷಕರ ಬಳಿ ಕೊಂಡೊಯ್ದು ತಪ್ಪೊಪ್ಪಿಕೊಂಡ ಆರೋಪಿ

ನವದೆಹಲಿ: 30 ವರ್ಷದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪ್ರೇಯಸಿಯ ಜೊತೆ ಕಾರಿನಲ್ಲೇ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏನಿದು ಪ್ರಕರಣ?: ದಕ್ಷಿಣ ದೆಹಲಿಯ ಶೇಕ್ ಸಾರೈನ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಆರೋಪಿ ತನ್ನ ಪ್ರೇಯಸಿಯೊಂದಿಗೆ...

ಗೋವಾ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಮರಕ್ಕೆ ಗುದ್ದಿದ ಕಾರ್- ಹಿರಿಯ ಪತ್ರಕರ್ತ ದುರ್ಮರಣ

1 week ago

ಬೆಳಗಾವಿ: ಕಾರ್ ಮರಕ್ಕೆ ಗುದ್ದಿದ ಪರಿಣಾಮ ಹಿರಿಯ ಪತ್ರಕರ್ತರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ  ನಂದಗಡದಲ್ಲಿ ನಡೆದಿದೆ. ಮೃತ ದುರ್ದೈವಿ ಪತ್ರಕರ್ತರನ್ನು ಡಾ. ವೀರೇಶ್ ಹಿರೇಮಠ್ ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್‍ಗೆ...

ತಮಾಷೆಗಾಗಿ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಸಾಮೂಹಿಕ ಅತ್ಯಾಚಾರವೆಸಗಿ ಕೊಲೆಗೈದ್ರು!

2 weeks ago

ಲಕ್ನೋ: ಉತ್ತರಪ್ರದೇಶದ ಬುಲಂದರ್ ಶಹರ್ ನಲ್ಲಿ ಜ. 2ರಂದು ನಡೆದ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಜುಲ್ಫೀಕರ್ ಅಬ್ಬಸಿ ಹಾಗೂ ದಿಲ್ ಶದ್ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಬುಲಂದರ್ ಶಹರ್ ನ ಸಿಕಂದ್ರಾಬಾದ್...

ವಿಡಿಯೋ: ಕಾರ್ ಡಿಕ್ಕಿಯಾಗಿ ನದಿಗೆ ಬಿದ್ದ ಬಸ್- ಹೀರೋ ಥರ ಬಂದು ಪ್ರಯಾಣಿಕರನ್ನ ಪಾರು ಮಾಡಿದ ಕ್ರೇನ್ ಚಾಲಕ

2 weeks ago

ಬೀಜಿಂಗ್: ಅಪಘಾತವಾಗಿ ಬಸ್ಸೊಂದು ನದಿಗೆ ಬಿದ್ದ ನಂತರ ಅದೇ ರಸ್ತೆಯಲ್ಲಿದ್ದ ಕ್ರೇನ್ ಚಾಲಕ ಪ್ರಯಾಣಿಕರನ್ನ ಪಾರು ಮಾಡಿರೋ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಜನವರಿ 3ರಂದು ಜಿಯಾಂಗ್ಸು ಪ್ರಾಂತ್ಯದ ಚಾಂಗ್‍ಝೌನಲ್ಲಿ ಈ ಘಟನೆ ನಡೆದಿದೆ....

ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

2 weeks ago

ರಾಮನಗರ: ಮಾಗಡಿ ಪುರಸಭೆ ಅದ್ಯಕ್ಷ ಚುನಾವಣೆಯಲ್ಲಿ ದಲಿತರಿಗೆ ಮಾತು ಕೊಟ್ಟು ಬೇರೆಯವರಿಗೆ ಮಣೆ ಹಾಕಿದ್ದಕ್ಕೆ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆದಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಇಂದು ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ನಡೆದಿತ್ತು. ಚುನಾವಣೆಗೆ ಮುನ್ನ...

ಕಲ್ಲುಕಂಬಕ್ಕೆ ಕಾರ್ ಡಿಕ್ಕಿ- ಓರ್ವ ಸಾವು, ಇಬ್ಬರಿಗೆ ಗಾಯ

3 weeks ago

ಚಿಕ್ಕಮಗಳೂರು: ಕೆರೆ ಏರಿಯ ಬದಿಯಲ್ಲಿದ್ದ ಕಲ್ಲುಕಂಬಕ್ಕೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಅಂತರಗಟ್ಟೆ ಗ್ರಾಮದ ಬಳಿ ನಡೆದಿದೆ. ಶನಿವಾರ ರಾತ್ರಿ ಅಜ್ಜಂಪುರದಿಂದ ಕಡೂರಿಗೆ ಬರುತ್ತಿದ್ದ ವೇಳೆ ಕಾರು...

ಹೊಸ ವರ್ಷದ ಪಾರ್ಟಿಯಲ್ಲಿ ಮದ್ಯ ಸೇವಿಸಿ ಡ್ರೈವಿಂಗ್- ಮಂಗ್ಳೂರಲ್ಲಿ ಕಾರ್ ಪಲ್ಟಿ

3 weeks ago

ಮಂಗಳೂರು: ಹೊಸವರ್ಷದ ಪಾರ್ಟಿಯ ಗುಂಗಿನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಹೋದ ಕಾರು ಪಲ್ಟಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ವಿವಿಧೆಡೆ ಹೊಸವರ್ಷದ ಪಾರ್ಟಿ ನಡೆದಿದ್ದು, ಮದ್ಯಪಾನ ಮಾಡಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಂಪ್ ವೆಲ್ ಬಳಿ...