Friday, 24th November 2017

Recent News

3 months ago

ಗಣೇಶ ಚತುರ್ಥಿಯಂದು ಭೀಕರ ರಸ್ತೆ ಅಪಘಾತ- ಓಮಿನಿ ಕಾರು, KSRTC ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ಗಣೇಶ ಚತುರ್ಥಿಯಂದು ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

3 months ago

 ಕಂಡಕ್ಟರ್-ಪೊಲೀಸರ ನಡುವೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲೇ ಕಿತ್ತಾಟ

ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಟಿಕೆಟ್ ವಿಚಾರವಾಗಿ ಪೊಲೀಸರು ಮತ್ತು ನಿರ್ವಾಹಕನ ನಡುವೆ ಜಗಳವಾಗಿ, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಾಳು ಗ್ರಾಮದ ಬಳಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಭಾನುವಾರ ಶ್ರವಣಬೆಳಗೊಳ ಚನ್ನರಾಯಪಟ್ಟಣ ನಡುವೆ ಸಂಚರಿಸುವ ಬಸ್ ನಲ್ಲಿ...

ನೀರಿನ ರಭಸಕ್ಕೆ ಹಳ್ಳಕ್ಕೆ ಉರುಳಿದ ಕೆಎಸ್‍ಆರ್‍ಟಿಸಿ ಬಸ್ – ಚಾಲಕ ಸೇರಿ ಐವರನ್ನ ರಕ್ಷಿಸಿದ ಸ್ಥಳೀಯರು

6 months ago

ಗದಗ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿನ ರಭಸಕ್ಕೆ ಕೆಎಸ್‍ಆರ್‍ಟಿಸಿ ಬಸ್ ಹಳ್ಳಕ್ಕೆ ಉರುಳಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ದೊಡ್ಡೂರ ಗ್ರಾಮದ ಬಳಿ ನಡೆದಿದೆ. ತುಂಬಿ ಹರಿಯುತ್ತಿರುವ ದೊಡ್ಡೂರ ಹಳ್ಳದಲ್ಲಿ ಚಾಲಕ ಬಸ್ ಚಲಾಯಿಸಿದ್ದಾರೆ....

ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ- ಪ್ರಯಾಣಿಕರು ಸೇಫ್

7 months ago

ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ಪಟ್ಟಣದ ಸೊಂಡೇಕುಪ್ಪ ಬೈಪಾಸ್ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಬಸ್‍ನಲ್ಲಿ ಈ ಬೆಂಕಿ ಅವಘಡ ನಡೆದಿದ್ದು, ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ...