Monday, 18th June 2018

Recent News

3 months ago

ನಿತಿನ್ ಗಡ್ಕರಿ ಜೊತೆ ಕ್ಷಮೆ ಕೇಳಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಕ್ಷಮೆ ಕೇಳಿದ್ದಾರೆ. ಈ ಮೂಲಕ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಬಾಕಿ ಇರುವ ಮಾನಹಾನಿ ಕೇಸ್ ಹಿಂಪಡೆಯುವ ಸಲುವಾಗಿ ಗಡ್ಕರಿ ಜತೆಗಿನ ಜಂಟಿ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. “ಸತ್ಯಾಂಶಗಳನ್ನು ಪರಿಶೀಲಿಸದೆಯೇ ನಾನು ನಿಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸುತ್ತೇನೆ. ದಯವಿಟ್ಟು ಈ ಹಿಂದೆ ನಡೆದ ಘಟನೆಗಳನ್ನು ಮರೆತು ಬಿಡಿ” ಎಂದು ಸಚಿವ ಗಡ್ಕರಿ ಅವರಿಗೆ ಕೇಜ್ರಿವಾಲ್ ಪತ್ರ […]

8 months ago

ದೆಹಲಿ ಸಿಎಂ ಕೇಜ್ರಿವಾಲ್ ಕಾರು ಕಳ್ಳತನ: ಎಫ್‍ಐಆರ್ ದಾಖಲು

ನವದೆಹಲಿ: ಆಪ್ ನಾಯಕ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೀಲಿ ಬಣ್ಣದ ವ್ಯಾಗನ್ ಆರ್ ಕಾರು ಕಳುವಾಗಿದೆ. ದೆಹಲಿಯ ಸಚಿವಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ಕಾರನ್ನು ಯಾರೋ ಕದ್ದುಕೊಂಡು ಹೋಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ವಿದೇಶಿ ಸ್ನೇಹಿತರೊಬ್ಬರು ಕೇಜ್ರಿವಾಲ್ ಅವರಿಗೆ ಈ ಕಾರನ್ನು ಉಡುಗೊರೆಯಾಗಿ ನೀಡಿದ್ದರು. 2014ರಲ್ಲಿ  ಪೊಲೀಸರ ವಿರುದ್ಧ ನಡೆಸಿದ...

ಇವಿಎಂ ಆಲ್ಲ, ಆಡಳಿತ ಪಕ್ಷದ ಸಾಫ್ಟ್ ವೇರ್ ಬದಲಾಗಬೇಕು: ಯೋಗೇಂದ್ರ ಯಾದವ್

1 year ago

ನವದೆಹಲಿ: ದೆಹಲಿಯ ಮತದಾರ ಕೇಜ್ರಿವಾಲ್ ರನ್ನು ತಿರಸ್ಕರಿಸಿ, ಪ್ರಧಾನಿ ಮೋದಿ ಅವರನ್ನು ಗೆಲ್ಲಿಸಿದ್ದಾನೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಹೇಳಿದ್ದಾರೆ. ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ನಾಯಕರಾಗಿ ಬಳಿಕ ಪಕ್ಷದಿಂದ ಉಚ್ಚಾಟನೆಯಾಗಿದ್ದ ಯೋಗೇಂದ್ರ ಯಾದವ್ ದೆಹಲಿ ಮಹಾನಗರ ಪಾಲಿಕೆ...

ದೆಹಲಿಯಲ್ಲಿ ಆಪ್‍ಗೆ ಸೋಲು ಯಾಕಾಯ್ತು? ಬಿಜೆಪಿ ಗೆದ್ದಿದ್ದು ಹೇಗೆ?

1 year ago

ನವದೆಹಲಿ: ಎರಡು ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ಆಪ್‍ಗೆ ಮತ ನೀಡಿದ್ದ ದೆಹಲಿಯ ಜನತೆ ಈ ಬಾರಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಮತ ನೀಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಂತೆ ದೆಹಲಿ ಮಹಾನಗರ ಪಾಲಿಕೆಯಯಲ್ಲಿ ಮೂರನೇ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಿದೆ. 2015ರ...

ಅಂಕಿ ಅಂಶಗಳಲ್ಲಿ ದೆಹಲಿ ದರ್ಬಾರ್: ಈ ಬಾರಿ ಗದ್ದುಗೆ ಯಾರಿಗೆ?

1 year ago

ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಬಳಿಕ ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದೆಹಲಿ ಮಹಾನಗರ ಪಾಲಿಕೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. 14 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಾರಿಯೂ ಲೋಕಸಭಾ ಚುನಾವಣೆಯಂತೆ ಫಲಿತಾಂಶ ಪ್ರಕವಾಗಿ ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ...

ಇವಿಎಂ ಪರೀಕ್ಷೆ ವೇಳೆ ಎಸ್‍ಪಿಗೆ ಹಾಕಿದ ಮತ ಬಿಜೆಪಿಗೆ: ಕಾಂಗ್ರೆಸ್ ಗಂಭೀರ ಆರೋಪ

1 year ago

ನವದೆಹಲಿ: ವಿದ್ಯುನ್ಮಾನ ಮತಯಂತ್ರದಲ್ಲಿ ಸಮಾಜವಾದಿ ಪಕ್ಷಕ್ಕೆ ಹಾಕಿದ ಮತ ಬಿಜೆಪಿಗೆ ಬಿದ್ದಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಏಪ್ರಿಲ್ 9ರಂದು ಮಧ್ಯಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯಲಿರುವ ಉಪಚುನಾವಣೆಗೆ ಅಲ್ಲಿನ ಚುನಾವಣಾ ಆಯೋಗ ಮಾಧ್ಯಮಗಳ ಮುಂದೆ ಶುಕ್ರವಾರ ಎವಿಎಂ ಪರೀಕ್ಷೆ ನಡೆಸಿತ್ತು....