Monday, 23rd April 2018

Recent News

2 days ago

ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಮುಂದಾದ ಜೆಡಿಎಸ್!

ಮಂಡ್ಯ: ಜಿಲ್ಲೆಯ ಮದ್ದೂರಿನ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಸದುಪಯೋಗ ಪಡೆದುಕೊಳ್ಳಲು ಮುಂದಾಗಿರುವ ಜೆಡಿಎಸ್ ಪಕ್ಷ ಕಾಂಗ್ರೆಸ್ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಮೊದಲ ಪ್ರಯತ್ನವಾಗಿ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ಅವರ ಸಂಬಂಧಿಯಾಗಿದ್ದ ಪ್ರವೀಣ್ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಕಲ್ಪನಾ ಸಿದ್ದರಾಜು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕೈ ತಪ್ಪಿದ್ದರ ಬಗ್ಗೆ ಕಣ್ಣೀರು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕಲ್ಪನಾ ಸಿದ್ದರಾಜು ಬೆಂಬಲಿಗರು, ಹಿತೈಷಿಗಳು ಕಾಂಗ್ರೆಸ್ […]

2 days ago

ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೆಬಲ್ ಸ್ಟಾರ್ ಅಂಬರೀಶ್‍ಗೆ ಮಂಡ್ಯದ ಬಿ ಫಾರಂ ಕೊಟ್ಟಿದ್ದೀವಿ. ಅವರು ನಿಂತುಕೊಳ್ಳಬೇಕು ಅಷ್ಟೇ. ಅಲ್ಲದೇ ಸ್ಪರ್ಧಿಸೋದು ಬಿಡೋದು ಅವರಿಗೆ ಬಿಟ್ಟಿದ್ದು. ಅಂಬರೀಶ್ ಬಿ ಫಾರಂ ರಿಸೀವ್ ಮಾಡ್ತಿಲ್ಲ ಎಂಬ ವಿಚಾರ ನನಗೆ...

ದ್ರಾವಿಡ್, ಕುಂಬ್ಳೆಗೆ ಟಿಕೆಟ್ ಆಫರ್ ನೀಡಿದ ಬಿಜೆಪಿ

5 days ago

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಅವರಿಗೆ ಟಿಕೆಟ್ ಆಫರ್ ನೀಡಿದ್ದು, ಆದರೆ ಇದನ್ನು ಇಬ್ಬರು ಆಟಗಾರರು ನಿರಾಕರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೂಲಗಳ ಪ್ರಕಾರ ಬಿಜೆಪಿ ಇಬ್ಬರು...

ಆಪ್ತರಿಗೆ ಎಂಎಲ್‍ಎ ಟಿಕೆಟ್ ನೀಡಿ: ಬಿಎಸ್‍ವೈಗೆ ಎಸ್‍ಎಂ ಕೃಷ್ಣ ಶಿಫಾರಸು ಪತ್ರ

5 days ago

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತನ್ನ ಎರಡು ಪಟ್ಟಿಗಳಲ್ಲಿ 154 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದು, ಈ ನಡುವೆ ಮಾಜಿ ಸಿಎಂ ಎಂಸ್ ಕೃಷ್ಣ ಕೆಲ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಶಿಫಾರಸು ಪತ್ರ ಬರೆದಿದ್ದಾರೆ....

ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ತಪ್ಪಿದ ಕೈ ಟಿಕೆಟ್- ಕಾರ್ಯಕರ್ತ ಆತ್ಮಹತ್ಯೆಗೆ ಯತ್ನ

6 days ago

ಉಡುಪಿ: ಕಾರ್ಕಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರಿಗೆ ಈ ಬಾರಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕಾರ್ಯಕರ್ತನೊಬ್ಬ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಉದಯ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ಇಂದು...

ಕೈ ಟಿಕೆಟ್‍ಗಾಗಿ ಕೋಟಿ ಕೋಟಿ ಹಣ ಕೇಳಿದ ನಾಯಕರ ಜಾತಕ ಬಿಡುಗಡೆ ಮಾಡ್ತೀವಿ: ಮುತ್ತಪ್ಪ ಸಹೋದರ ಮುದ್ದಪ್ಪ

1 week ago

ಮಡಿಕೇರಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ಬೆನ್ನಲ್ಲೇ ಕೊಡಗು ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಭಾನುವಾರ ರಾತ್ರಿ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆ ಆದ ನಂತರ ಕೊಡಗು ಕಾಂಗ್ರೆಸ್ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಚಂದ್ರಮೌಳಿ...

ಬಿಪಿ, ಶುಗರ್ ಏನಿಲ್ಲ ಆದ್ರೆ ಆರೋಗ್ಯ ಸರಿಯಿಲ್ಲ ಅಂತ ಕ್ಯಾನ್ಸಲ್ ಮಾಡಿದ್ದಾರೆ: ಟಿಕೆಟ್ ವಂಚಿತ ಅಭ್ಯರ್ಥಿ

1 week ago

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ 218 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಬಾದಾಮಿಯ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಿದೆ. ಇದರಿಂದ ಕಾಂಗ್ರೆಸ್ ಪಟ್ಟಿ ಬಿಡುಗಡೆಗೊಂಡ ಹಿನ್ನೆಲೆಯಲ್ಲಿ ಭಿನ್ನಮತ ಮುಗಿಲೆದ್ದಿದೆ. ಭಾನುವಾರ ರಾತ್ರಿ ಕಾಂಗ್ರೆಸ್ ಪಟ್ಟಿ ರಿಲೀಸ್ ಆಗಿದ್ದು, ಇದರಲ್ಲಿ ಈ...

15 ಮಹಿಳೆಯರಿಗೆ `ಕೈ’ ಟಿಕೆಟ್- ಜಾತಿವಾರುಗಳಿಗೆ ಎಷ್ಟು ಟಿಕೆಟ್ ಲಭಿಸಿದೆ: ಇಲ್ಲಿದೆ ಸಂಪೂರ್ಣ ಮಾಹಿತಿ!

1 week ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಒಟ್ಟು 218 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ. ಈ ಬಾರಿ 15 ಮಹಿಳೆಯರಿಗೆ ‘ಕೈ’ ಟಿಕೆಟ್ ಸಿಕ್ಕಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬೆಳಗಾವಿ ಗ್ರಾಮಾಂತರ, ಅಂಜಲಿ ನಿಂಬಾಳ್ಕರ್ ಗೆ ಖಾನಾಪುರ,...