Wednesday, 20th June 2018

2 weeks ago

ನನಗೇನೂ ಆಗಿಲ್ಲ, ಚೆನ್ನಾಗಿದ್ದೇನೆ- ಕಾರ್ ಅಪಘಾತಕ್ಕೆ ಪುನೀತ್ ಸ್ಪಷ್ಟನೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪುನೀತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿಯಲ್ಲಿ `ನಟಸಾರ್ವಭೌಮ` ಚಿತ್ರದ ಶೂಟಿಂಗ್ ಮುಗಿಸಿ ಹಿಂದಿರುಗುತ್ತಿದ್ದಾಗ ಗುರುವಾರ ರಾತ್ರಿ 9.30ರ ಸುಮಾರಿಗೆ ಆಂಧ್ರ ಪ್ರದೇಶದ ಅನಂತಪುರ ಸಮೀಪದಲ್ಲಿ ಕಾರಿನ ಟಯರ್ ಬ್ಲಾಸ್ಟ್ ಆಗಿ ಮೂರು ರಸ್ತೆಗಳ ತಿರುವು ಗೊತ್ತಾಗದೇ ಇರುವ ಕಾರಣ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನ ಹೆಡ್ ಲೈಟ್ ಬಳಿ ಬಂಪರ್ ಗೆ  ಹಾನಿಯಾಗಿದೆ. ಪುನೀತ್ ರಾಜ್‍ ಕುಮಾರ್ ಹಾಗೂ ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುನೀತ್ […]

2 months ago

ಪುನೀತ್ ಬದಲಿಗೆ ಕೋಟ್ಯಾಧಿಪತಿ ಶೋಗೆ ಎಂಟ್ರಿಕೊಡಲಿದ್ದಾರೆ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ

ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ `ಕನ್ನಡದ ಕೋಟ್ಯಾಧಿಪತಿ’ ಕಾರ್ಯಕ್ರಮವು ಬರೀ ಸ್ಯಾಂಡಲ್‍ವುಡ್ ಗೆ ಸೀಮಿತವಾಗಿರದೆ ಬಾಲಿವುಡ್ ನಲ್ಲೂ ಜನಪ್ರಿಯವಾಗಿದೆ. ಈಗಾಗಲೇ ಕೋಟ್ಯಾಧಿಪತಿ ಕಾರ್ಯಕ್ರಮದ ಎರಡು ಸೀಸನ್ ಗಳು ಮುಗಿದಿದ್ದು, ಮೂರನೇ ಸೀಸನ್ ಶುರು ಮಾಡಲು ಖಾಸಗಿ ವಾಹಿನಿ ಸಿದ್ಧತೆ ನಡೆಸುತ್ತಿದೆ. ಆದರೆ ಈಗ ಮೂರನೇ ಆವೃತ್ತಿಯ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್...

55ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ನವರಸನಾಯಕ ಜಗ್ಗೇಶ್

3 months ago

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಇಬ್ಬರು ನಟರಿಗೆ ಹುಟ್ಟುಹಬ್ಬದ ಸಂಭ್ರಮ. ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಂಡ್ರೆ, ಇತ್ತ ಜಗ್ಗೇಶ್ ದೇವಸ್ಥಾನಕ್ಕೆ ತೆರಳಿದ್ದಾರೆ. ಹೌದು. ಜಗ್ಗೇಶ್ ಅವರು ತಮ್ಮ 55 ಹುಟ್ಟುಹಬ್ಬದ...

ಪುನೀತ್ ಹೊಸ ಹೇರ್ ಸ್ಟೈಲ್ ಫೋಟೋ ವೈರಲ್ – ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ

3 months ago

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಹೊಸ ಹೇರ್ ಸ್ಟೈಲ್ ಫೋಟೋ ಇದೀಗ ಹೆಚ್ಚು ವೈರಲ್ ಆಗಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರಿಂದ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ಪುನೀತ್ ರಾಜ್ ಕುಮಾರ್ ಅವರು ಕನ್ನಡದ ಹೆಮ್ಮೆಯ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ಡಾ.ರಾಜ್...

ವಿದ್ವತ್ ಆರೋಗ್ಯ ವಿಚಾರಿಸಿ ಕಣ್ಣೀರು ಹಾಕಿದ ನಟ ಪುನೀತ್ ರಾಜ್ ಕುಮಾರ್! ವೀಡಿಯೋ ನೋಡಿ

4 months ago

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ. ನಗರದ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ನಟ ಪುನೀತ್ ಅವರು ವಿದ್ವತ್ ಆರೋಗ್ಯ ವಿಚಾರಿಸಿದ್ದು,...

ಕಲಾವಿದರ ಸಂಘದ ಗೃಹಪ್ರವೇಶದಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಅಂಬರೀಷ್

4 months ago

ಬೆಂಗಳೂರು: ಕನ್ನಡ ಚಲನಚಿತ್ರ ಕಲಾವಿದರ ಸಂಘದ ನೂತನ ಕಟ್ಟಡದ ಗೃಹಪ್ರವೇಶ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು. ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅಧ್ಯಕ್ಷತೆಯಲ್ಲಿ ಕನ್ನಡ ಕಲಾವಿದರ ಸಂಘ ನಿರ್ಮಿತವಾಗಿದ್ದು ಸ್ವತಃ ಅಂಬಿ ದಂಪತಿ ಶಾಸ್ತ್ರಬದ್ಧವಾಗಿ ಗೃಹಪ್ರವೇಶ ಪೂಜೆ ನೆರವೇರಿಸಿದ್ರು. ಈ...

ಇಂದಿನಿಂದ ಅಂಜನಿಪುತ್ರ ಪ್ರದರ್ಶನ ರದ್ದು

6 months ago

ಬೆಂಗಳೂರು: ಅಂಜನಿಪುತ್ರ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶ ಪಾಲನೆಗಾಗಿ ಡಿಜಿ ಐಜಿಪಿಗೆ ನೋಟಿಸ್ ಜಾರಿ ಮಾಡಿದೆ. ಚಿತ್ರದಲ್ಲಿ ವಕೀಲ ವೃತ್ತಿಗೆ ಅಪಮಾನ ಮಾಡಲಾಗಿದೆ ಎಂಬ ಕಾರಣಕ್ಕೆ ಜ.2ರವರೆಗೂ ಈ ಚಿತ್ರದ ಪ್ರದರ್ಶನಕ್ಕೆ ನ್ಯಾಯಾಲಯ...

ಅಂಜನಿಪುತ್ರ ಚಿತ್ರಕ್ಕೆ ತಡೆಯಾಜ್ಞೆ- ನಿರ್ಮಾಪಕ, ವಿತರಕ ಜಾಕ್ ಮಂಜು ಪ್ರತಿಕ್ರಿಯೆ

6 months ago

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಅಂಜನಿಪುತ್ರ’ ಚಿತ್ರಕ್ಕೆ ಒಂದಲ್ಲ ಒಂದು ಕಂಟಕಗಳು ಎದುರಾಗುತ್ತಲೇ ಇವೆ. ಚಿತ್ರ ಪ್ರದರ್ಶಗೊಂಡ ದಿನದಂದೇ ಅಪ್ಪು ಅಭಿಮಾನಿಯೊಬ್ಬ ಸಿನಿಮಾವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಇದೀಗ ಕೋರ್ಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ...