Saturday, 23rd June 2018

Recent News

1 week ago

ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿ: ಭಾರೀ ಅನಾಹುತದಿಂದ ಪಾರಾದ ಚಾಲಕ!

ರಾಯಚೂರು: ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಯಚೂರಿನ ದೇವದುರ್ಗದ ಗಬ್ಬೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಪೆಟ್ರೋಲ್ ತುಂಬಿಕೊಂಡು ಟ್ಯಾಂಕರ್ ರಾಯಚೂರಿನಿಂದ ಕಲಬುರಗಿಗೆ ಹೊರಟಿತ್ತು. ಗಬ್ಬೂರು ಸಮೀಪದಲ್ಲಿ ಎಮ್ಮೆ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ರಸ್ತೆ ಪಕ್ಕದ ಹೊಲದಲ್ಲಿ ಬಿದ್ದಿದೆ. ಟ್ಯಾಂಕರ್ ನಲ್ಲಿ ಸುಮಾರು 12 ಸಾವಿರ ಲೀಟರ್ ಪೆಟ್ರೋಲ್ ಇತ್ತು. ಪಲ್ಟಿಯಾಗಿರುವ ಪರಿಣಾಮ ಸ್ವಲ್ಪ ಪ್ರಮಾಣದ ಪೆಟ್ರೋಲ್ ಸೋರಿಕೆಯಾಗಿದೆ. ಅದೃಷ್ಟವಶಾತ್ ಹೊಲದಲ್ಲಿ ಟ್ಯಾಂಕರ್ […]

1 week ago

ಪೆಟ್ರೋಲ್ ವಿತರಣಾ ಘಟಕಕ್ಕೆ ಡಿಕ್ಕಿ ಹೊಡೆದು, ಆಟೋಗೆ ಗುದ್ದಿದ ಕಾರ್-ವಿಡಿಯೋ ನೋಡಿ

ರಾಜ್‍ಕೋಟ್: ವೇಗವಾಗಿ ಬಂದ ಕಾರೊಂದು ಬಂಕ್ ನ ಪೆಟ್ರೋಲ್ ವಿತರಣಾ ಘಟಕಕ್ಕೆ ಗುದ್ದಿಕೊಂಡು ಆಟೋಗೂ ಗುದ್ದಿರುವ ಆಘಾತಕಾರಿ ಅಪಘಾತವೊಂದು ನಗರದಲ್ಲಿ ನಡೆದಿದೆ. ಇಡೀ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಪೆಟ್ರೋಲ್ ವಿತರಣಾ ಘಟಕಕ್ಕೆ ಗುದ್ದಿರುವುದರಿಂದ ಘಟಕ ಮುರಿದು ಬಿದ್ದಿದೆ. ನಂತರ ಆಟೋಕ್ಕೆ ಗುದ್ದಿ ಆಟೋ ಮಗಚಿ ಬಿದ್ದಿದೆ. ಈ ಅಪಘಾತದಲ್ಲಿ ಮೂರು ಜನರು ಗಾಯಗೊಂಡಿದ್ದು,...

ಪೆಟ್ರೋಲ್, ಡೀಸೆಲ್ ದರ 60 ಪೈಸೆ ಇಳಿಕೆಯಾಗಿಲ್ಲ, ಇಳಿಕೆಯಾಗಿದ್ದು ಕೇವಲ 1 ಪೈಸೆ!

3 weeks ago

ನವದೆಹಲಿ: 16 ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಡೀಸೆಲ್ ದರ 1 ಪೈಸೆ ಇಳಿಕೆಯಾಗಿದೆ. ಪ್ರತಿದಿನ ತೈಲ ದರ ಪರಿಷ್ಕರಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ವೆಬ್‍ಸೈಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ 60 ಪೈಸೆ ಇಳಿಕೆಯಾದ ಬಗ್ಗೆ ವರದಿಯಾಗಿತ್ತು. ಈ...

ನೀವಿದ್ದಾಗ 300 ರೂ.ಗೆ 1 ಜಿಬಿ ಡೇಟಾ, ಈಗ 300 ರೂ.ಗೆ 100 ಜಿಬಿ ಡೇಟಾ: ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು

1 month ago

ನವದೆಹಲಿ: ಕಾಂಗ್ರೆಸ್ ತಮ್ಮ ಅಧಿಕಾರವಧಿಯಲ್ಲಿನ ಸ್ಥಿತಿಯನ್ನು ಮರೆತು ಈಗಿನ ತೈಲ ಬೆಲೆ ಏರಿಕೆಗೆ ಕೇಂದ್ರಸರ್ಕಾರವೇ ಕಾರಣ ಎಂದು ಆರೋಪಿಸುತ್ತಿದೆ ಎಂದು ಬಿಜೆಪಿ ಮುಖಂಡ ಜೆ ಮಿಶ್ರಾ ಆರೋಪಿಸಿದ್ದಾರೆ. 2004 ರಲ್ಲಿ ಒಂದು ಲೀಟರ್ ಪೆಟ್ರೋಲ್ ಗೆ 29 ರೂ. ಇತ್ತು. 2014...

ಪೆಟ್ರೋಲ್ ದರವನ್ನು 25 ರೂ ಕಡಿತ ಮಾಡಬಹುದು, ಆದ್ರೆ ಸರ್ಕಾರ ಮಾಡಲ್ಲ: ಚಿದಂಬರಂ

1 month ago

ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 25 ರೂ. ಕಡಿಮೆ ಮಾಡಬಹುದು. ಆದರೆ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ. ಈ ಸಂಬಂಧ ನಿತಂತರ ಟ್ವಿಟ್ ಮಾಡಿರುವ ಅವರು, ಪೆಟ್ರೋಲ್ ದರದಲ್ಲಿ ಕೇಂದ್ರ...

ಇಂಧನ ಬೆಲೆ ಏರಿಕೆ ಸ್ಕೂಟರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ

1 month ago

ಹೈದರಾಬಾದ್: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿಯೂ ತೆಲಗು ದೇಶಂ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ನಂದಿಗಾಮ ಗ್ರಾಮದಲ್ಲಿ ಟಿಡಿಪಿ ಕಾರ್ಯಕರ್ತರು ತಮ್ಮ...

ಸದ್ಯದಲ್ಲೇ ತೈಲ ದರ ಮತ್ತಷ್ಟು ಏರಿಕೆ: ಬೆಲೆ ಏರುತ್ತಿರುವುದು ಯಾಕೆ? ರಾಜ್ಯ, ಕೇಂದ್ರದ ಪಾಲು ಎಷ್ಟು? ದರ ಇಳಿಕೆಯಾಗುತ್ತಾ?

1 month ago

ನವದೆಹಲಿ: ಈಗಾಗಲೇ ಪೆಟ್ರೋಲ್, ಡೀಸೆಲ್ ರೇಟ್ ಜಾಸ್ತಿ ಆಗಿದೆ. ಈ ಮಧ್ಯೆ ಮತ್ತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚುತ್ತಲೇ ಇದ್ದು, ಕೆಲದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 3ರಿಂದ 4 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆ ಇದೆ....

ಕರ್ನಾಟಕ ಮತದಾನದ ಬೆನ್ನಲ್ಲೇ ಶಾಕ್ – ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶುರು

1 month ago

ಬೆಂಗಳೂರು: ಕರ್ನಾಟಕದಲ್ಲಿ ಮತದಾನ ಮುಗಿಯುತ್ತಿದ್ದಂತೆ ನಿರೀಕ್ಷೆಯಂತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಳವಾಗಿವೆ. ತೈಲ ಕಂಪನಿಗಳು ಲೀಟರ್ ಪೆಟ್ರೋಲ್‍ಗೆ 17 ಪೈಸೆ, ಡೀಸೆಲ್‍ಗೆ 21 ಪೈಸೆಯಷ್ಟು ಹೆಚ್ಚಿಸಿವೆ. ದಿನಂಪ್ರತಿ ಬೆಲೆ ಏರಿಳಿಕೆ ಮಾಡೋ ನಿಯಮವಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದುಬಾರಿ ಮತ್ತು ಡಾಲರ್...