Wednesday, 22nd November 2017

Recent News

2 days ago

ಸೆಲ್ಫಿ ಕ್ಲಿಕ್ಕಿಸುತ್ತಿದ್ದ ವಿದ್ಯಾರ್ಥಿಯ ಕೈಗೆ ಏಟು ಕೊಟ್ಟ ಸಚಿವ ಡಿಕೆಶಿ

ಬೆಳಗಾವಿ: ಸೆಲ್ಫಿ ಕ್ಲಿಕ್ಕಿಸಲು ಬಂದಿದ್ದ ವಿದ್ಯಾರ್ಥಿಯೊಬ್ಬನಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಏಟು ಕೊಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಶೇಖ್ ಹೋಮಿಯೋಪತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಹಕ್ಕು ದಿನಾಚರಣೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಡಿಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ  ಮಾತನಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಹಿಂದಿನಿಂದ ಸೆಲ್ಫಿ ಕ್ಲಿಕ್ಕಿಸಲು ಮುಂದಾಗಿದ್ದಾನೆ. ಇದನ್ನು ನೋಡಿದ ಡಿಕೆ ಶಿವಕುಮಾರ್ ಸಿಟ್ಟಾಗಿ ಆತನ ಕೈಗೆ ಹೊಡೆದಿದ್ದಾರೆ. ಕೂಡಲೇ ವಿದ್ಯಾರ್ಥಿ ಆ ಸ್ಥಳದಿಂದ ಓಡಿ ಹೋಗಿದ್ದಾನೆ.

1 week ago

ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

ಬೆಳಗಾವಿ: ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಪರಿಷತ್‍ನಲ್ಲಿ ಹೇಳಿಕೆ ನೀಡಿದ ರಮೇಶ್ ಕುಮಾರ್, ವಿಧೇಯಕದ ಬಗ್ಗೆ ಭಾವುಕರಾಗಿ ಮಾತನಾಡಿ ಕಣ್ಣೀರಿಟ್ಟರು. ರೋಗಿಗಳ ಸಾವಿನಿಂದ ಕಳೆದ ರಾತ್ರಿ ನಾನು ನಿದ್ರೆಯೇ ಮಾಡಿಲ್ಲ ಎಂದು ಪರಿತಪಿಸಿದರು. ಈಶ್ವರಪ್ಪ ನನ್ನ ಕೊಲೆಗುಡುಕ ಅಂತ ಹೇಳಿದ್ದಾರೆ. ನಾನು...