Saturday, 23rd June 2018

Recent News

4 weeks ago

ಡಿಜಿ ನೀಲಮಣಿರಾಜುಗೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸೂಚನೆ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಡಿಜಿ ನೀಲಮಣಿರಾಜು ಅವರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಕುಮಾರಸ್ವಾಮಿ ಮನೆಗೆ ಡಿಜಿ ನೀಲಮಣಿರಾಜು ಭೇಟಿ ನೀಡಿ ಚರ್ಚೆ ನಡೆಸಿದ್ದು, ಭದ್ರತೆಯ ಬಗ್ಗೆ ಸಿಎಂ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಿಎಂ ಅವರು, ಯಾವುದೇ ಕಾರಣಕ್ಕೂ ಬಹುಮತ ಸಾಬೀತುಪಡಿಸುವ ಸಮಯದಲ್ಲಿ ಗೊಂದಲ, ಗಲಾಟೆ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ […]

1 month ago

ಮಾಜಿ ಪ್ರಧಾನಿಯವರ ಮನೆಯ ಸುತ್ತಮುತ್ತ ಬಿಗಿ ಭದ್ರತೆ!

ಬೆಂಗಳೂರು: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರು ಇಂದು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ಮಧ್ಯೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಮನೆಗೂ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ....

ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ

4 months ago

ಬೆಂಗಳೂರು: ಲೋಕಾಯುಕ್ತರಿಗೆ ಭದ್ರತೆ ನೀಡಲು ಆಗಿಲ್ಲ ಅಂದರೆ ರಾಜ್ಯ ಸರ್ಕಾಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಉಪ ಲೋಕಾಯುಕ್ತ ನ್ಯಾ. ಚಂದ್ರಶೇಖರಯ್ಯ ಕಿಡಿಕಾರಿದ್ದಾರೆ. ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಲೋಕಾಯುಕ್ತ ಕಚೇರಿಗೆ ವ್ಯವಸ್ಥಿತ...

ಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

5 months ago

ಮೈಸೂರು: ಜಿಲ್ಲೆಯ ಹುಣಸೂರಿನ ಹನುಮ ಜಯಂತಿ ಮೆರವಣಿಗೆಗೆ ಜಿಲ್ಲಾಡಳಿತ ಹಾಕಿದ ನಿರ್ಬಂಧನೆಗಳನ್ನು ಈದ್ ಮಿಲಾದ್ ಮೆರವಣಿಗೆಗೂ ಹಾಕಬೇಕು, ಹಿಂದೂಗಳನ್ನು ಅದರಲ್ಲಿ ಬಳಸಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಇಂದು ನಡೆದ ಹನುಮ ಜಯಂತಿ ಮೆರವಣಿಗೆ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ...

ಒಂದೇ ಒಂದು ಫೋನ್ ಕರೆಗೆ ಶೂಟಿಂಗ್ ಕ್ಯಾನ್ಸಲ್ ಮಾಡಿ ಮನೆಗೆ ಹೋದ ಸಲ್ಲು

5 months ago

ಮುಂಬೈ: ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‍ಗೆ ಜೀವ ಬೆದರಿಕೆ ಬಂದಿದ್ದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ನಿಲ್ಲಿಸಿ ಪೊಲೀಸರ ರಕ್ಷಣೆ ಜೊತೆಗೆ ಮನೆಗೆ ಹೋಗಿದ್ದಾರೆ. ಮುಂಬೈನ ಫಿಲ್ಮ್ ಸಿಟಿಯಲ್ಲಿ ಸಲ್ಮಾನ್ ಖಾನ್ `ರೇಸ್ 3′ ಸಿನಿಮಾದ ಚಿತ್ರೀಕರಣದಲ್ಲಿದ್ದರು. ಆದರೆ ಯಾರೋ ಸಲ್ಲುಗೆ ಕರೆ ಮಾಡಿ...

ಹೊಸ ವರ್ಷದ ಹೊತ್ತಲ್ಲೇ ಶಾಕ್- ಬೆಂಗಳೂರಿನ ಮೇಲೆ ಅಲ್‍ಖೈದಾ ವಕ್ರದೃಷ್ಟಿ

6 months ago

ಬೆಂಗಳೂರು: ಹೊಸ ವರ್ಷದ ದಿನ ರಾಜ್ಯದ ಮೇಲೆ ಅಲ್‍ಖೈದಾ ವಕ್ರದೃಷ್ಟಿ ಬೀರಿದೆ ಎನ್ನಲಾಗಿದೆ. ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ನುಸುಳಲಿರುವ ಉಗ್ರರು ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ...

ನಿಷೇಧಿತ ಪ್ರದೇಶದಲ್ಲಿ ದಾಂಧಲೆ – ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರಿಂದ ಹೈ ಅಲರ್ಟ್

7 months ago

ಚಿಕ್ಕಮಗಳೂರು: ಭದ್ರತೆಗಾಗಿ ನಾಲ್ಕು ಸಾವಿರ ಪೊಲೀಸರು ನಿಯೋಜನೆಗೊಂಡಿದ್ದರೂ ದತ್ತಜಯಂತಿಯನ್ನ ಶಾಂತಿಯುತವಾಗಿ ನಿಭಾಯಿಸುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಶ್ರೀರಂಗಯ್ಯ, ಎಸ್ಪಿ ಅಣ್ಣಾಮಲೈ ಹಾಗೂ ಪಶ್ವಿಮ ವಲಯದ ಐಜಿಪಿ ಹೇಮಂತ್ ನಿಂಬಾಳ್ಕರ್ ಅದೇ ಸ್ಥಳದಲ್ಲಿದ್ದರೂ ಕೂಡ ದತ್ತಪೀಠದಲ್ಲಿ ನಡೆಯಬಾರದೆಲ್ಲ...

ವಿಜೃಂಭಣೆಯಿಂದ ನಡೆದ ಹನುಮ ಮಾಲಾ ಜಯಂತಿ- ಅಂಜನಾದ್ರಿ ಬೆಟ್ಟವೇರಿದ ಸಾವಿರಾರು ಭಕ್ತರು

7 months ago

ಕೊಪ್ಪಳ: ಹನುಮ ಜನಿಸಿದ ನಾಡು ಕೊಪ್ಪಳದಲ್ಲಿ ಪ್ರತಿ ವರ್ಷದಂತೆ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ. ಪ್ರತಿ ವರ್ಷ ಹನುಮ ಜಯಂತಿಯಂದು ಭಕ್ತರು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸ್ತಾರೆ. ವ್ರತ ಕೈಗೊಂಡ ಭಕ್ತರು ಇಲ್ಲಿಗೆ ಬಂದು ಹನುಮ ಮಾಲೆಯನ್ನು ವಿಸರ್ಜನೆ...