Sunday, 19th November 2017

Recent News

2 days ago

1 ತಿಂಗ್ಳ ಮಗುವಿನ ಜೀವ ಉಳಿಸಲು 7 ಗಂಟೆಯಲ್ಲಿ 516 ಕಿ.ಮೀ ಕ್ರಮಿಸಿದ್ರು ಈ ಆಂಬುಲೆನ್ಸ್ ಡ್ರೈವರ್

ತಿರುವನಂತಪುರಂ: ರೋಗಿಯ ಪ್ರಾಣ ಉಳಿಸಲು ಆಂಬುಲೆನ್ಸ್ ಗಳು ಸೂಕ್ತ ಸಮಯಕ್ಕೆ ಅವರನ್ನ ಆಸ್ಪತ್ರೆಗೆ ಕರೆದೊಯ್ಯುವುದು ತುಂಬಾ ಮುಖ್ಯವಾಗುತ್ತದೆ. ಹೀಗೆ ಒಂದು ತಿಂಗಳ ಮಗುವಿನ ಪ್ರಾಣ ಉಳಿಸುವ ಸಲುವಾಗಿ ಆಂಬುಲೆನ್ಸ್ ಚಾಲಕರೊಬ್ಬರು ಉತ್ತರ ಕಣ್ಣೂರು ನಗರದಿಂದ ಕೇರಳ ರಾಜಧಾನಿ ತಿರುವನಂತಪುರಂವರೆಗೆ ಆಂಬುಲೆನ್ಸ್ ನಲ್ಲಿ 7 ಗಂಟೆ ಸಮಯದಲ್ಲಿ ಬರೋಬ್ಬರಿ 516 ಕಿ.ಮೀ ಕ್ರಮಿಸಿ ಸುದ್ದಿಯಾಗಿದ್ದಾರೆ. ಗೂಗಲ್ ಮ್ಯಾಪ್‍ನ ಪ್ರಕಾರ ನೋಡಿದರೆ ಸ್ವಲ್ಪ ಟ್ರಾಫಿಕ್ ನಡುವೆ ಇಷ್ಟು ದೂರವನ್ನು ಕ್ರಮಿಸಲು ಬರೋಬ್ಬರಿ 13 ಗಂಟೆ ಸಮಯ ಬೇಕು. ಅದರಲ್ಲೂ ಕೇರಳದ […]

2 days ago

ವೈದ್ಯರ ನಿರ್ಲಕ್ಷ್ಯಕ್ಕೆ ರಾತ್ರಿ ಮತ್ತೊಂದು ಮಗು ಸಾವು – ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ

ಬೆಳಗಾವಿ: ಖಾಸಗಿ ವೈದ್ಯರ ಮುಷ್ಕರಕ್ಕೆ ರಾತ್ರಿ ಮತ್ತೊಂದು ಮಗು ಜೀವಬಿಟ್ಟಿದೆ. ಸಕಾಲಕ್ಕೆ ಚಿಕಿತ್ಸೆ ದೊರೆಯದೇ 45 ದಿನಗಳ ಕಂದಮ್ಮ ಅಸುನೀಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಖೋಡದಲ್ಲಿ ಸಂಭವಿಸಿದೆ. ಸುರೇಶ ವಡ್ರಾಳೆ ಹಾಗೂ ಶ್ರೀದೇವಿ ವಡ್ರಾಳೆ ದಂಪತಿಯ ಮಗು ವಿಪರೀತ ಜ್ವರದಿಂದ ಬಳಲುತ್ತಿತ್ತು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕ ಚಿಕಿತ್ಸೆ ಸಿಗಲಿಲ್ಲ ಅಂತ ಹಾರೂಗೇರಿ ಹಾಗೂ...

ಕಾರ್ ನಲ್ಲಿ ಮಗುವಿಗೆ ಹಾಲುಣಿಸುವಾಗಲೇ ಮಹಿಳೆಯೊಂದಿಗೆ ಅಮಾನವೀಯ ವರ್ತನೆ ತೋರಿದ ಟ್ರಾಫಿಕ್ ಪೊಲೀಸ್..!

1 week ago

ಮುಂಬೈ: ಕಾರಲ್ಲಿ ಮಹಿಳೆ ತನ್ನ 7 ತಿಂಗಳ ಮಗುವಿಗೆ ಹಾಲುಣಿಸುವಾಗಲೇ ಟ್ರಾಫಿಕ್ ಪೊಲೀಸರು ಅಮಾನವೀಯವಾಗಿ ವರ್ತಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ಮಲಾಡ್ ವೆಸ್ಟ್ ನಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದ...

ವಿಡಿಯೋ: ಮಂಚದ ಸಮೇತ 8 ಕಿ.ಮೀ ದೂರ ಬಾಣಂತಿಯನ್ನು ಹೊತ್ತು ಸಾಗಿದ ಡಾಕ್ಟರ್

2 weeks ago

ಭುವನೇಶ್ವರ: ವೈದ್ಯರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬರದೆ, ಸೂಕ್ತ ಚಿಕಿತ್ಸೆ ನೀಡದೆ ಅಥವಾ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳು ಬಲಿಯಾದ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತಲೇ ಇರುತ್ತದೆ. ಆದರೆ ಇಲ್ಲೊಬ್ಬ ವೈದ್ಯರು ಸುಮಾರು 8 ಕಿ.ಮೀ ದೂರ ಬಾಣಂತಿಯೊಬ್ಬರನ್ನು ಮಂಚದ ಸಮೇತ ಹೊತ್ತೊಯ್ದು ಮಾದರಿಯಾಗಿದ್ದಾರೆ....

ಚಿಕಿತ್ಸೆ ಸಿಗದೆ ಆಂಬುಲೆನ್ಸ್ ನಲ್ಲೇ ಮಹಿಳೆಗೆ ಹೆರಿಗೆ- ಮಗು ಸಾವು

2 weeks ago

ಬಾಗಲಕೋಟೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಸಿಗದ ಕಾರಣ ಮಹಿಳೆಯೊಬ್ಬರಿಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿ ಮಗು ಹುಟ್ಟಿದ ತಕ್ಷಣವೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷದಿಂದ ಮಗು ಸಾವನ್ನಪ್ಪಿದೆ ಎಂದು ತಡರಾತ್ರಿ ಆಸ್ಪತ್ರೆ...

82ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಂದೆಯಾದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ

3 weeks ago

ಕಲಬುರಗಿ: ಜಿಲ್ಲೆಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ ಶ್ರೀ ಶರಣಬಸಪ್ಪ ಅಪ್ಪಾ ಅವರು ತಮ್ಮ 82ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಂದೆಯಾಗಿದ್ದಾರೆ. ಶ್ರೀ ಶರಣಬಸಪ್ಪ ಅವರ ಪತ್ನಿ 40 ವರ್ಷದ ದಾಕ್ಷಾಯಿಣಿ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ...

ಬಾಲ್ಕನಿಯ ಕಂಬಿಗಳ ಮಧ್ಯೆ ಮಗುವಿನ ತಲೆ ಸಿಲುಕಿಕೊಂಡಿದ್ರೆ ಈ ತಂದೆ ಏನು ಮಾಡಿದ ಗೊತ್ತಾ?

3 weeks ago

ಬೀಜಿಂಗ್: ಮಕ್ಕಳು ಆಟವಾಡುವಾಗ ಏನಾದ್ರೂ ತೊಂದರೆಯಾದ್ರೆ ಪೋಷಕರು ಥಟ್ಟನೆ ಬಂದು ಮಗುವಿನ ರಕ್ಷಣೆ ಮಾಡ್ತಾರೆ. ಮಗು ಅಪಾಯದಲ್ಲಿದ್ರೆ ಎಲ್ಲಾ ದೇವರಿಗೂ ಅಲ್ಲೇ ಹರಕೆ ಮಾಡಿಕೊಳ್ತಾರೆ. ಹೀಗೆ ಮಗುವೊಂದರ ತಲೆ ಬಾಲ್ಕನಿಯ ಕಂಬಿಗಳ ಮಧ್ಯೆ ಸಿಲುಕಿಕೊಂಡು ಅಗ್ನಿಶಾಮಕ ಸಿಬ್ಬಂದಿ ಮಗುವನ್ನ ಕಾಪಾಡಲು ಕಷ್ಟಪಡುತ್ತಿದ್ರೆ...

ಗಂಟಲಲ್ಲಿ ಚಕ್ಕುಲಿ ಸಿಲುಕಿ 1 ವರ್ಷದ ಪುಟ್ಟ ಕಂದಮ್ಮ ದುರ್ಮರಣ!

3 weeks ago

ಮಂಗಳೂರು: ಗಂಟಲಲ್ಲಿ ಚಕ್ಕುಲಿ ಸಿಕ್ಕಿ ಒಂದು ವರ್ಷದ ಪುಟ್ಟ ಕಂದಮ್ಮವೊಂದು ಮೃತಪಟ್ಟ ಆಘಾತಕಾರಿ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಗಂಡು ಮಗುವನ್ನು ಅರುಷ್ ಎಂದು ಗುರುತಿಸಲಾಗಿದ್ದು, ಈತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ...