Tuesday, 19th September 2017

Recent News

5 hours ago

ಶಾಲೆಯ 3ನೇ ಮಹಡಿಯಿಂದ ತಳ್ಳಿ ಬಾಲಕಿಯ ಕೊಲೆ!

ಲಕ್ನೋ: ಗುರ್ಗಾವ್‍ನ ಶಾಲೆಯೊಂದರ ಟಾಯ್ಲೆಟ್‍ನಲ್ಲಿ 2ನೇ ಕ್ಲಾಸ್ ಬಾಲಕನ ಕೊಲೆ ಪ್ರಕರಣ ಮಾಸುವ ಮುನ್ನವೇ ಉತ್ತರಪ್ರದೇಶದಲ್ಲಿ ಶಾಲೆಯ ಮೂರನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಕೊಲೆ ಮಾಡಲಾಗಿದೆ ಎನ್ನುವ ಆರೋಪವೊಂದು ಕೇಳಿ ಬಂದಿದೆ. ಇಲ್ಲಿನ ಡಿಯೋರಿಯಾದ ಮಾರ್ಡನ್ ಸಿಟಿ ಮಾಂಟೆಸ್ಸರಿ ಶಾಲೆಯಲ್ಲಿ ಸೋಮವಾರದಂದು ಈ ಘಟನೆ ನಡೆದಿದೆ. 16 ವರ್ಷದ ಬಾಲಕಿ ನೀತು ಚೌಹಾಣ್ ಮೂರನೇ ಮಹಡಿಯಲ್ಲಿದ್ದ ಟಾಯ್ಲೆಟ್‍ಗೆ ಹೋಗಿದ್ದು, ಅಲ್ಲಿಂದ ಕೆಳಗೆ ಬಿದ್ದಿದ್ದಾಳೆ. ಆಕೆಯ ಕ್ಲಾಸ್‍ರೂಮ್ ಮೊದಲನೇ ಮಹಡಿಯಲ್ಲಿತ್ತು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಕೆಳಗೆ ಬಿದ್ದ ನೀತೂಳನ್ನು […]

8 hours ago

ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ಗಲಾಟೆ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಮಂಡ್ಯ: ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ ಗಾಯಗೊಂಡವರು. ಚಲುವರಾಜು ಮತ್ತು ನಾಗರಾಜು ಮನೆ ಅಕ್ಕಪಕ್ಕದಲ್ಲಿತ್ತು. ಮನೆಯ ಸಮೀಪ ಓಡಾಡುವ ಜಾಗದ...

ತಾಯಿಯನ್ನು ಕಾಪಾಡಲು ಬಂದ ಮೂವರು ಮಕ್ಕಳು ಸಜೀವ ದಹನ

3 days ago

ಭೋಪಾಲ್: ಬೆಂಕಿ ಹಚ್ಚಿಕೊಂಡು ಆತ್ಯಹತ್ಯೆ ಮಾಡಿಕೊಳ್ಳುತ್ತಿದ್ದ ತಾಯಿಯನ್ನು ಉಳಿಸಲು ಹೋಗಿ ಮೂವರು ಹೆಣ್ಣು ಮಕ್ಕಳು ಸಜೀವವಾಗಿ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಶುಕ್ರವಾರ ಮಧ್ಯಪ್ರದೇಶದ ದಾಮೋಹ್‍ನ ಮೌನ್ಸಿಪುರ ಗ್ರಾಮದಲ್ಲಿ ನಡೆದಿದೆ. ತಾಯಿ ರಾಣಿ ಲೋಧಿ ಮೊದಲಿಗೆ ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ....

ಡೆತ್‍ನೋಟ್ ಬರೆದಿಟ್ಟು ಎಂಜಿನಿಯರ್ ಆತ್ಮಹತ್ಯೆ

3 days ago

ಮಂಡ್ಯ: ಡೆತ್‍ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಎಂಜಿನಿಯರ್‍ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವದಲ್ಲಿ ಈ ಘಟನೆ ಸಂಭವಿಸಿದೆ. ಹಾರೋಹಳ್ಳಿ ಗ್ರಾಮದ ನಿವಾಸಿ ಎಚ್.ಪಿ.ರಾಜು ಗೌಡ(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ...

ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರ್- ವ್ಯಕ್ತಿ ಸ್ಥಳದಲ್ಲೇ ಸಾವು

3 days ago

ಚಿಕ್ಕಮಗಳೂರು: ಶಿಕಾರಿಗೆ ಹೋದ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಎನ್‍ಆರ್ ಪುರ ತಾಲೂಕಿನ ಸಾರ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ಧರ್ಮಯ್ಯ ಹಾಗೂ ಗಂಗಾಧರ್ ಎಂಬವರು ಶಿಕಾರಿಗೆ ಹೋಗಿದ್ರು. ಈ...

KSRTC ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

3 days ago

ಬೆಂಗಳೂರು: ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಂಗೇರಿಯ ಮೈಲಸಂದ್ರದ ದುಬಾಸಿಪಾಳ್ಯಾದ ಬಳಿ ನಡೆದಿದೆ. ಶುಕ್ರವಾರ ರಾತ್ರಿ ಪಾದಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬಸ್ ಏಕಾಏಕಿ ಪಾದಾಚಾರಿಗೆ ಗುದ್ದಿದೆ. ಬಸ್ ಗುದ್ದಿದ ರಭಸದಿಂದ...

ಊರಿಗೇ ಊರೇ ಹಾವಿನ ಕಾಟದಿಂದ ಹೈರಾಣ- ರಾತ್ರಿ ಮಲಗೋಕಾಗಲ್ಲ, ಬೆಳಗಾದ್ರೆ ಸಾವಿನ ಸುದ್ದಿ ತಪ್ಪಲ್ಲ

5 days ago

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸಕೋಟೆ ಗ್ರಾಮದ ಜನ ಹಾವಿನ ಕಾಟದಿಂದ ಹೈರಾಣವಾಗಿದ್ದಾರೆ. ಗ್ರಾಮದ ಪಶ್ಚಿಮ ದಿಕ್ಕಿನಲ್ಲಿ ಬೆಟ್ಟವಿದ್ದು ಸರಿ ಸುಮಾರು ಐದು ಸಾವಿರ ಜನ ಇಲ್ಲಿ ವಾಸ ಮಾಡ್ತಿದ್ದಾರೆ. ಆದ್ರೆ 3 ತಿಂಗಳಿನಿಂದ ಈ ಗ್ರಾಮದ ಜನ ಸರಿಯಾಗಿ ನಿದ್ದೆ...

ಒಬ್ಬನನ್ನು ರಕ್ಷಿಸಲು ಹೋಗಿ ಮತ್ತೊಬ್ಬನೂ ಕೃಷಿ ಹೊಂಡಕ್ಕೆ ಬಿದ್ದು ಸಾವು

6 days ago

ಮಂಡ್ಯ: ಕೃಷಿ ಹೊಂಡದೊಳಗೆ ಬಿದ್ದು ಹೊರಬಾರದೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. 18 ವರ್ಷದ ಚಂದನ್ ಮತ್ತು 12 ವರ್ಷದ ಕಿರಣ್ ಮೃತ ದುದೈರ್ವಿಗಳು....