Wednesday, 22nd November 2017

Recent News

1 week ago

ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

ಬೆಳಗಾವಿ: ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಪರಿಷತ್‍ನಲ್ಲಿ ಹೇಳಿಕೆ ನೀಡಿದ ರಮೇಶ್ ಕುಮಾರ್, ವಿಧೇಯಕದ ಬಗ್ಗೆ ಭಾವುಕರಾಗಿ ಮಾತನಾಡಿ ಕಣ್ಣೀರಿಟ್ಟರು. ರೋಗಿಗಳ ಸಾವಿನಿಂದ ಕಳೆದ ರಾತ್ರಿ ನಾನು ನಿದ್ರೆಯೇ ಮಾಡಿಲ್ಲ ಎಂದು ಪರಿತಪಿಸಿದರು. ಈಶ್ವರಪ್ಪ ನನ್ನ ಕೊಲೆಗುಡುಕ ಅಂತ ಹೇಳಿದ್ದಾರೆ. ನಾನು ಎಷ್ಟು ಕೊಲೆ ಮಾಡಿದ್ದೇನೆ. ನನ್ನ ವಿರುದ್ಧ ಎಷ್ಟು ಕೇಸು ದಾಖಲಾಗಿದೆ ಅನ್ನೋದನ್ನು ತಿಳಿಸಿ ಅಂತ ತಿರುಗೇಟು ನೀಡಿದರು. ವಿದೇಶದಲ್ಲಿರೋ ನನ್ನ […]

1 week ago

ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

ಬೆಂಗಳೂರು: ಬೆಳಗಾವಿಯಲ್ಲಿ ಆಯೋಜನೆಗೊಂಡಿರುವ ವಿಶೇಷ ಅಧಿವೇಶನಕ್ಕೆ ಚಕ್ಕರ್ ಹಾಕಿ ಉಪ್ಪು ಹುಳಿ ಖಾರ ಸಿನಿಮಾದ ಕಾರ್ಯಕ್ರಮಕ್ಕೆ ಮಾಜಿ ವಸತಿ ಸಚಿವ ಅಂಬರೀಶ್ ಹಾಜರಾಗಿದ್ದು ಟೀಕೆಗೆ ಗುರಿಯಾಗಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ನಟ ಅಂಬರೀಶ್ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ...