Friday, 21st July 2017

Recent News

1 month ago

ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಮಾಡಿದ್ದಕ್ಕೆ ವ್ಯಕ್ತಿಗೆ ಗಲ್ಲು ಶಿಕ್ಷೆ

ಇಸ್ಲಾಮಾಬಾದ್: ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಮಾಡಿದ್ದಕ್ಕೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ಕೋರ್ಟ್ ವ್ಯಕ್ತಿಯೊಬ್ಬನಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಸರ್ಕಾರಿ ಪ್ರಾಸಿಕ್ಯೂಟರ್‍ವೊಬ್ಬರು ಭಾನುವಾರದಂದು ತಿಳಿಸಿದ್ದಾರೆ. 30 ವರ್ಷದ ತೈಮೂರ್ ರಾಜಾ ಗಲ್ಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿದ ಕಾರಣಕ್ಕೆ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಲಾಗಿರುವುದು ಪಾಕಿಸ್ತಾನದಲ್ಲಿ ಇದೇ ಮೊದಲು ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ಧರ್ಮನಿಂದನೆ ಅತ್ಯಂತ ಸೂಕ್ಷ್ಮವಾದ ವಿಚಾರಚಾಗಿದ್ದು, ಪ್ರವಾದಿ ಮೊಹಮ್ಮದ್‍ರನ್ನು ನಿಂದಿಸುವುದು ಮಹಾಪರಾಧವೆಂದು ಪರಿಗಣಿಸಲ್ಪಟ್ಟಿದೆ. ತೈಮೂರ್ ರಾಜಾ ಫೇಸ್‍ಬುಕ್‍ನಲ್ಲಿ ಪ್ರವಾದಿ ಮೊಹಮ್ಮದ್, ಅವರ […]

2 months ago

ಬಾಲಕಿಯನ್ನು ಕಚ್ಚಿದ್ದ ನಾಯಿಗೆ ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆ

ಲಾಹೋರ್: ಭಾರತದ ಪ್ರಜೆ ಕುಲಭೂಷಣ್ ಜಾಧವ್‍ಗೆ ಗಲ್ಲು ಶಿಕ್ಷೆ ನೀಡಿದ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ ನಡುವೆ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಪಾಕಿಸ್ತಾನ ವಿಶ್ವದಾದ್ಯಂತ ಸುದ್ದಿಯಲ್ಲಿದೆ. ಆಗಿದ್ದು ಇಷ್ಟೇ, ಪಂಜಾಬ್ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಗೆ ಕಚ್ಚಿತ್ತು. ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ನಾಯಿಯ ವಿರುದ್ಧ ದೂರು ನೀಡಿದ್ದರು. ವಿಚಾರಣೆ...