Saturday, 18th November 2017

Recent News

1 day ago

ಹಣದ ಆಸೆಯೇ ಇಲ್ಲ, ರೋಗಿಗಳ ಸೇವೆ ಎಲ್ಲ – 5 ರೂ.ಗೆ ಟ್ರೀಟ್‍ಮೆಂಟ್ ಕೊಡ್ತಾರೆ ಮಂಡ್ಯದ ಡಾಕ್ಟರ್

ಮಂಡ್ಯ: ರಾಜ್ಯಾದ್ಯಂತ ವೈದ್ಯರು ಮುಷ್ಕರ ಮಾಡುತ್ತಿದ್ದರೆ, ಮಂಡ್ಯದ ಡಾಕ್ಟರ್ ಶಂಕರೇಗೌಡ ಮಾತ್ರ ತಮ್ಮ ಪಾಡಿಗೆ ತಾವು ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚರ್ಮ ಮತ್ತು ಲೈಂಗಿಕ ರೋಗ ತಜ್ಞರಾಗಿ ಹತ್ತಾರು ವರ್ಷಗಳಿಂದ ನಿರಂತರವಾಗಿ ಬಡ ಜನರಿಗೆ ಅನುಕೂಲವಾಗುವಂತೆ ಸೇವೆ ಸಲ್ಲಿಸುತ್ತಿರುವ ಶಂಕರೇಗೌಡರು 5 ರೂಪಾಯಿ ಡಾಕ್ಟರ್ ಎಂದೇ ಚಿರಪರಿಚಿತರು. ಇವರು ಸ್ವಗ್ರಾಮ ಶಿವಳ್ಳಿಯಲ್ಲಿ ಉಚಿತವಾಗಿ ರೋಗಿಗಳನ್ನು ಪರೀಕ್ಷೆ ಮಾಡ್ತಾರೆ. ಮಂಡ್ಯದ ತಮ್ಮ ಕ್ಲೀನಿಕ್‍ನಲ್ಲಿ ಮಾತ್ರ ಪ್ರತಿಯೊಬ್ಬರಿಗೆ 5 ರೂಪಾಯಿ ಪಡೆಯುತ್ತಾರೆ. ಮಂಡ್ಯದ ತಮ್ಮ ಕ್ಲಿನಿಕ್ ನಲ್ಲಿ ಮಾತನಾಡಿದ ಅವರು, […]

1 day ago

ವಿಜಯಪುರ: ವೈದ್ಯನ ಚುಚ್ಚುಮದ್ದಿಗೆ ಬಾಲಕಿ ಸಾವು

ವಿಜಯಪುರ: ವೈದ್ಯನ ಎಡವಟ್ಟಿನಿಂದ ಬಾಲಕಿ ಸಾನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಆಲಮೇಲ ಪಟ್ಟಣದಲ್ಲಿ ನಡೆದಿದೆ. 8 ವರ್ಷದ ರೂಪಾ ರಾಮಣ್ಣ ಬಂಡಿವಡ್ಡರ ಮೃತಪಟ್ಟಿರುವ ಬಾಲಕಿ. ಅಲಮೇಲ ಪಟ್ಟಣದ ನಿವಾಸಿ ರಾಮು ಬಂಡಿವಡ್ಡರ ಎಂಬವರು ಮಗಳು. ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದಳು. ತೀವ್ರ ಜ್ವರದಿಂದ ಬಳಲುತ್ತಿದ್ದ ತಮ್ಮ ಮಗಳು ರೂಪಾಳನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ...

ಖಾಸಗಿ ವೈದ್ಯರ ಮುಷ್ಕರಕ್ಕೆ ಬಿಜೆಪಿ ಮುಖಂಡ ಬಲಿ

2 days ago

ಹುಬ್ಬಳ್ಳಿ: ಖಾಸಗಿ ವೈದ್ಯರ ಮುಷ್ಕರಕ್ಕೆ ಜನರ ಜೀವ ಬಲಿಯಾಗುವ ಘಟನೆಗಳು ನಡೆಯುತ್ತಿವೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಮುಖಂಡ ಚನ್ನು ಹಳಿಯಾಳ ಎಂಬವರು ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಚನ್ನು ಹಳಿಯಾಳ ಅವರನ್ನು ಗೋಕುಲ್ ರಸ್ತೆಯಲ್ಲಿರುವ ಸುಚಿರಾಯು ಆಸ್ಪತ್ರೆಗೆ...

ಹತ್ತೇ ದಿನದಲ್ಲೇ ಎರಡನೇ ಬಾರಿ ಮುಷ್ಕರ – ಬೆಳಗಾವಿ ಚಲೋಗೆ ಖಾಸಗಿ ಆಸ್ಪತ್ರೆಗಳು ಬಂದ್

5 days ago

ಬೆಳಗಾವಿ: ಖಾಸಗಿ ವೈದ್ಯಕೀಯ ಸಂಸ್ಥೆ ನಿಯಂತ್ರಣ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಚಳಿಗಾಲ ಅಧಿವೇಶನದಲ್ಲಿ ಮುಂದಾಗಿದ್ದು, ಕಾಯ್ದೆಗೆ ತಿದ್ದುಪಡಿ ಒತ್ತಾಯಿಸಿ ಇಂದು ಖಾಸಗಿ ವೈದ್ಯರು ಬೆಳಗಾವಿ ಚಲೋ ಹೋರಾಟ ಹಮ್ಮಿಕೊಂಡಿದ್ದಾರೆ. ಇದರ ಹಿನ್ನೆಲೆ ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು...

ಮಂಡ್ಯ: ಪ್ರಾಣ ಉಳಿಸಿದ ವೈದ್ಯರಿಗೆ ಸನ್ಮಾನ ಮಾಡಿದ ಮಹಿಳೆ

1 week ago

ಮಂಡ್ಯ: ಸರಿಯಾಗಿ ಚಿಕಿತ್ಸೆ ನೀಡದೇ ರೋಗಿಗಳ ಸಾವಿಗೆ ಕಾರಣವಾಗೋ ವೈದ್ಯರಿಗೆ ಸಾರ್ವಜನಿಕರೇ ಬುದ್ಧಿ ಕಲಿಸಿದ ಅದೆಷ್ಟೋ ಉದಾಹರಣೆಗಳನ್ನ ನೀವು ಕೇಳಿರುತ್ತೀರಿ. ಅದಕ್ಕೆ ಭಿನ್ನ ಎಂಬಂತೆ ರೋಗಗ್ರಸ್ಥವಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ತನ್ನನ್ನು ಉಳಿಸಿದ ವೈದ್ಯರಿಗೆ ಮಂಡ್ಯದ ಬಡ ಮಹಿಳೆಯೊಬ್ಬರು ಸನ್ಮಾನ ಮಾಡಿದ್ದಾರೆ....

ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಸಾವು – ಬಾಗಲಕೋಟೆ ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟನೆ

2 weeks ago

ಬಾಗಲಕೋಟೆ: ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ಶವವನ್ನು ಆಸ್ಪತ್ರೆಯ ಮುಂದೆ ಇಟ್ಟು ಪತ್ರಿಭಟನೆ ಮಾಡುತ್ತಿರುವ ಘಟನೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ನಡೆದಿದೆ. ಜಮಖಂಡಿ ತಾಲೂಕಿನ ಚಿಕ್ಕ ಪಡಸಲಗಿ ಗ್ರಾಮದ ನಿವಾಸಿಯಾದ ಪರಮಾನಂದ ಐಗಳಿ (25) ಎಂಬ ಯುವಕನೇ ಮೃತಪಟ್ಟ ದುರ್ದೈವಿ. ನವೆಂಬರ್...

ವಿಡಿಯೋ: ಮಂಚದ ಸಮೇತ 8 ಕಿ.ಮೀ ದೂರ ಬಾಣಂತಿಯನ್ನು ಹೊತ್ತು ಸಾಗಿದ ಡಾಕ್ಟರ್

2 weeks ago

ಭುವನೇಶ್ವರ: ವೈದ್ಯರು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬರದೆ, ಸೂಕ್ತ ಚಿಕಿತ್ಸೆ ನೀಡದೆ ಅಥವಾ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿಗಳು ಬಲಿಯಾದ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತಲೇ ಇರುತ್ತದೆ. ಆದರೆ ಇಲ್ಲೊಬ್ಬ ವೈದ್ಯರು ಸುಮಾರು 8 ಕಿ.ಮೀ ದೂರ ಬಾಣಂತಿಯೊಬ್ಬರನ್ನು ಮಂಚದ ಸಮೇತ ಹೊತ್ತೊಯ್ದು ಮಾದರಿಯಾಗಿದ್ದಾರೆ....

ಸರ್ಕಾರಿ ಆಸ್ಪತ್ರೆಯಿಂದ್ಲೂ ರೋಗಿಗಳು ಶಿಫ್ಟ್- ಕೆಎಂಸಿಯಲ್ಲಿ ಮಾತ್ರ ಎಮರ್ಜೆನ್ಸಿ ಟ್ರೀಟ್‍ಮೆಂಟ್

2 weeks ago

ಉಡುಪಿ: ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ಉಡುಪಿ ಜಿಲ್ಲೆಯ 35ಕ್ಕೆ ಹೆಚ್ಚು ಪ್ರಮುಖ ಖಾಸಗಿ ಆಸ್ಪತ್ರೆಗಳು ಎಮರ್ಜೆನ್ಸಿಯನ್ನೂ ಬಂದ್ ಮಾಡಿದೆ. ಒಪಿಡಿಗಳಲ್ಲೂ ಟ್ರೀಟ್‍ಮೆಂಟ್ ಸಿಗುತ್ತಿಲ್ಲ. ಸಾವಿರಕ್ಕೂ ಮಿಕ್ಕಿ ಕ್ಲಿನಿಕ್‍ಗಳು ಮುಚ್ಚಿದೆ. ಈ ನಡುವೆ ಮಣಿಪಾಲ ಕೆಎಂಸಿ ಆಸ್ಪತ್ರೆ...