Monday, 22nd January 2018

Recent News

6 days ago

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ ರವಾನಿಸಿದ್ದ ಪಿಎಸ್‍ಐ ವರ್ಗಾವಣೆ

ಹಾವೇರಿ: ಪತ್ರಕರ್ತನ ಮೃತ ದೇಹವನ್ನು ಕಸ ಸಾಗಿಸುವ ಟ್ರ್ಯಾಕ್ಟರ್ ನಲ್ಲಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪಿಎಸ್‍ಐ ವರ್ಗಾವಣೆಯಾಗಿದ್ದಾರೆ. ಹಾವೇರಿ ಎಸ್ಪಿ ಕೆ. ಪರಶುರಾಂ ಹಾನಗಲ್ ಅವರು ಗುರುರಾಜ ಮೈಲಾರ ಅವರನ್ನು ಹಾನಗಲ್ ಪಿಎಸ್‍ಐ ಹುದ್ದೆಯಿಂದ ಜಿಲ್ಲಾ ವಿಶೇಷ ಗುಪ್ತದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಭಾನುವಾರ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗುಂಡೂರು ಗ್ರಾಮದ ಬಳಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಸುದ್ದಿವಾಹಿನಿ ವರದಿಗಾರ ಮೌನೇಶ ಪೋತರಾಜ್ (29) ಮೃತಪಟ್ಟಿದ್ದರು. […]

7 days ago

ಯುವತಿಯ ಫೋಟೋ ಕ್ಲಿಕ್ಕಿಸಿದ ಮೌಲ್ವಿ ಬಂಧನ

ಹಾವೇರಿ: ಯುವತಿಯ ಫೋಟೋ ಕ್ಲಿಕ್ಕಿಸಿದ ಮೌಲ್ವಿಯನ್ನ ಜಿಲ್ಲೆಯ ಬ್ಯಾಡಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ಮೊಹಮ್ಮದ್ ಶಹಜಮಾಲ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಶಹಜಮಾಲ್ ಮೂಲತಃ ಪಶ್ಚಿಮ ಬಂಗಾಳದ ಇಸ್ಲಾಂಪುರ ನಿವಾಸಿ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಧರ್ಮ ಬೋಧನೆ ಮಾಡಿಕೊಂಡಿದ್ದನು. ಭಾನುವಾರ ಯುವತಿ ದರ್ಗಾದ ಬಳಿ ಇದ್ದ ಅಂಗಡಿವೊಂದಕ್ಕೆ ತೆರಳಿದ್ದಾರೆ. ಈ ವೇಳೆ ಮೌಲ್ವಿ...

ಲಾರಿ ಹರಿದು ಮಹಿಳೆ ಸಾವು – ಉದ್ರಿಕ್ತರಿಂದ ಕಲ್ಲು ತೂರಾಟ

1 week ago

ಹಾವೇರಿ: ವೇಗವಾಗಿ ಬಂದ ಲಾರಿ ಪಾದಚಾರಿ ಮಹಿಳೆಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಶಾಂತಮ್ಮ ಬಾಣಾಪುರ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮಹಿಳೆ...

ಟ್ರಾಕ್ಟರ್ ಪಲ್ಟಿ- ಇಂಜಿನ್ ಕೆಳಗೆ ಸಿಲುಕಿ ಚಾಲಕ ಸಾವು

1 week ago

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಇಂಜಿನ್ ಕೆಳಗೆ ಸಿಲುಕಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನ ಮಂಜುನಾಥ ಕಡೇಮನಿ (18) ಎಂದು ಗುರುತಿಸಲಾಗಿದೆ. ಮೃತ ಮಂಜುನಾಥ...

ಈ ಕಾರಣಕ್ಕೆ ಹಾವೇರಿ ಸ್ವಾಮೀಜಿ ಆತ್ಮಹತ್ಯೆಗೆ ಶರಣಾದ್ರು!

2 weeks ago

ಹಾವೇರಿ: ಜಿಲ್ಲೆಯ ಬಾಲೇಹೊಸೂರಿನ ದಿಂಗಾಲೇಶ್ವರ ಮಠ ಶಾಖಾ ಮಠದ 38 ವರ್ಷದ ಮಹಾಲಿಂಗ ಸ್ವಾಮೀಜಿ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದರು. ಸ್ವಾಮೀಜಿ ಡೆತ್ ನೋಟ್‍ನಲ್ಲಿ ಮನಃಶಾಂತಿ ಇಲ್ಲ, ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಬರೆದಿದ್ದರು. ಸ್ವಾಮೀಜಿ ಆವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು...

ಡೆತ್‍ನೋಟ್ ಬರೆದು ಮಠದಲ್ಲೇ ನೇಣು ಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ

2 weeks ago

ಹಾವೇರಿ: ಡೆತ್‍ನೋಟ್ ಬರೆದಿಟ್ಟು ಮಠದಲ್ಲೇ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಮಹಾಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾದವರು. ಇವರು ಹುಲ್ಲತ್ತಿ ದಿಂಗಾಲೇಶ್ವರ ಶಾಖಾ ಮಠದ ಸ್ವಾಮೀಜಿಯಾಗಿದ್ದರು. ಗದಗ ಜಿಲ್ಲೆ...

ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ – ಯುವಕ ಅರೆಸ್ಟ್

2 weeks ago

ಹಾವೇರಿ: ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರೋ ಅಮಾನವೀಯ ಘಟನೆಯೊಂದು ಜಿಲ್ಲೆಯ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ನಾಗರಾಜ ಗೊರವರ (21) ಎಂದು ಗುರುತಿಸಲಾಗಿದ್ದು, ಈತ ಹದಿನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. 2017 ಡಿಸೆಂಬರ್...

ಡಿವೈಡರ್ ಗೆ ಕಾರು ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

4 weeks ago

ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದಲ್ಲಿ ನಡೆದಿದೆ. ಮೃತರನ್ನ ಗುರುರಾಜ ರಾಯಚೂರು (76) ಮತ್ತು ರಾಮಣ್ಣ ರಾಯಚೂರು (59)...