Saturday, 21st April 2018

Recent News

2 weeks ago

ಚುನಾವಣೆ ಹೊತ್ತಲ್ಲೇ ಐಟಿಯಿಂದ ಕಾಂಗ್ರೆಸ್‍ಗೆ ಬಿಗ್‍ಶಾಕ್

ಬೆಂಗಳೂರು: ರಾಜ್ಯ ಚುನಾವಣೆಯ ಪ್ರಚಾರದಲ್ಲಿರೋ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್ ನೀಡಿದೆ. ಕಂಟ್ರಾಕ್ಟರ್ ಪೇಮೆಂಟ್ ಗೋಲ್ಮಾಲ್ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಹತ್ವದ ಸುಳಿವೊಂದು ಸಿಕ್ಕಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಐಟಿ ಅಧಿಕಾರಿ ಬಾಲಕೃಷ್ಣನ್ ಪತ್ರ ಬರೆದಿದ್ದು, ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳ ಕಂಟ್ರಾಕ್ಟರ್‍ಗಳ ಟೆಂಡರ್ ಮೊತ್ತದ ಬಗ್ಗೆ ದಾಖಲೆ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದೆ. ಚುನಾವಣೆಗಾಗಿ ಕಂಟ್ರಾಕ್ಟರ್‍ಗಳಿಗೆ ಬಿಗ್ ಪೇಮೆಂಟ್ ನೀಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿರುವ […]

4 weeks ago

ಚೀಟಿ ಹರಿದ ಪ್ರಕರಣದಲ್ಲಿ ಜಾಮೀನು ಮಂಜೂರು- ಸಚಿವ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಈಗಲ್‍ ಟನ್ ರೆಸಾರ್ಟ್‍ನಲ್ಲಿ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 25 ಸಾವಿರ ರೂ. ಶ್ಯೂರಿಟಿ, ಸಾಕ್ಷಿ ನಾಶ ಮಾಡಬಾರದು, ತನಿಖಾಧಿಕಾರಿಗಳ ಮುಂದೆ ಸರಿಯಾಗಿ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳೊಂದಿಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ....

ಎಂಜಿನಿಯರಿಂಗ್ ಓದುತ್ತಿರೋ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್: ಜಾಬ್‍ಗೆ ಚಿಂತೆ ಮಾಡಬೇಡಿ

4 months ago

ನವದೆಹಲಿ: ಅಂತಿಮ ವರ್ಷದ ಎಂಜಿನಿಯರಿಂಗ್ ಪದವಿ/ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. 2018ರಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸುಮಾರು 2 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಯುವ ಜನತೆಗೆ ಉದ್ಯೋಗವಕಾಶ ರೂಪಿಸುವ ದೃಷ್ಟಿಯಲ್ಲಿ 2017ನೇ...

ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ

4 months ago

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ವಿದ್ಯಾರಣ್ಯಪುರದ ದೊಡ್ಡಬೊಮ್ಮಸಂದ್ರದಲ್ಲಿರೋ ಲಾವಣ್ಯ ಎಂಬುವರ ಮನೆಯಲ್ಲಿ ದರೋಡೆ ನಡೆದಿದೆ. ಕಳೆದ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇನ್‍ಕಮ್ ಟ್ಯಾಕ್ಸ್ ನವರು ಎಂದು ಹೇಳಿ...

ಕರ್ನಾಟಕದಿಂದ ಕೇರಳಕ್ಕೆ ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 4 ಬ್ಯಾಗಲ್ಲಿ ಸಾಗಾಟವಾಗ್ತಿತ್ತು 34 ಕೆಜಿ ಚಿನ್ನ!

6 months ago

ಬೆಂಗಳೂರು: ಕರ್ನಾಟಕದಿಂದ ಕೇರಳಕ್ಕೆ 34 ಕೆಜಿ ಚಿನ್ನವನ್ನು ಅಕ್ರಮವಾಗಿ ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಕೇರಳದ...

ಬೇನಾಮಿದಾರರ ಮಾಹಿತಿ ಕೊಟ್ರೆ 1 ಕೋಟಿ ರೂ. ಬಹುಮಾನ!

7 months ago

ನವದೆಹಲಿ: ಕೇಂದ್ರ ಸರ್ಕಾರ ಕಾಳಧನಿಕರ ವಿರುದ್ಧ ತನ್ನ ಹೋರಾಟವನ್ನು ಮುಂದುವರೆಸುವ ಸೂಚನೆಯನ್ನು ನೀಡಿದೆ. ಸರ್ಕಾರವು ಈಗಾಗಲೇ ಕಾಳಧನಿಕರ ವಿರುದ್ಧ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದರು ಪೂರ್ಣ ಪ್ರಮಾಣದಲ್ಲಿ ಬೇನಾಮಿ ಅಸ್ತಿಯ ಮಾಹಿತಿಯನ್ನು ಪಡೆಯಲು ಸಾಧ್ಯವಾಗಿಲ್ಲ. ಸರ್ಕಾರ ಹೊಸ ಹೊಸ ಮಾರ್ಗಗಳ ಮೂಲಕ...

ಗುಜರಾತ್ ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ – ಸಚಿವ ಡಿಕೆಶಿ ನಿವಾಸಗಳ ಮೇಲೂ ರೇಡ್

9 months ago

– ಸಿಆರ್‍ಪಿಎಫ್ ಭದ್ರತೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿರುವ ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ರೆಸಾರ್ಟ್‍ಗೆ ಬಂದ ಅಧಿಕಾರಿಗಳು ಪ್ರತಿಯೊಬ್ಬ ಶಾಸಕರ ರೂಂಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರೆಸಾರ್ಟ್‍ನಿಂದ...

ಗುಜರಾತ್ ಕೈ ಪಡೆಗೆ ರೆಸಾರ್ಟ್ ಭಾಗ್ಯದ ಎಫೆಕ್ಟ್ – ಸಚಿವ ಡಿಕೆಶಿ ಮೇಲೆ ಐಟಿ ಕಣ್ಣು

9 months ago

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಐಟಿ ಆಟ ಶುರುವಾಗುವಂತಿದೆ. ಗುಜರಾತ್ ಕೈ ಶಾಸಕರಿಗೆ ರೇಸಾರ್ಟ್‍ನಲ್ಲಿ ಸೌಕರ್ಯ ಕಲ್ಪಿಸಿರುವ ಕಾಂಗ್ರೆಸ್ ನಾಯಕರಿಗೆ ಐಟಿ ಬಿಸಿ ತಟ್ಟೋ ಸಾಧ್ಯತೆ ಇದೆ. ಪ್ರಮುಖವಾಗಿ ಗುಜರಾತ್ ಕೈ ಶಾಸಕರನ್ನು ಸೇಫ್ ಗಾರ್ಡ್ ಮಾಡ್ತಿರುವ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತವರ...